ಬರ ಪರಿಹಾರ ಸಂಬಂಧ ಶಾ ಹೇಳಿಕೆ ಸಾಬೀತಾದ್ರೆ ರಾಜಿನಾಮೆ: ಸಿದ್ದರಾಮಯ್ಯ

24

Get real time updates directly on you device, subscribe now.


ಮೈಸೂರು: ರಾಜ್ಯದಲ್ಲಿ ಬರ ಘೋಷಣೆಯಾದ ಬಳಿಕ ನಾವು ಸೆ.23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ, ಇದು ಸುಳ್ಳು ಎನ್ನುವುದಾದರೆ ನಾನು ರಾಜೀನಾಮೆ ಕೊಡುತ್ತೇನೆ, ಅದು ಸತ್ಯವಾಗಿದ್ದರೆ ಅಮಿತ್ ಶಾ ರಾಜೀನಾಮೆ ನೀಡುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ, ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ, ನಂತರ ಡಿಸೆಂಬರ್ 19 ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿ ತಿಳಿಸಿದ್ದೇನೆ, ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು ಎಂದು ಹೇಳಿದರು.

ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ, ರಾಜ್ಯಕ್ಕೆ ಬರ ಪರಿಹಾರ ನೀಡದ ಇವರಿಗೆ ಯಾವ ನೈತಿಕತೆ ಇದೆ, ದೇಶದ ಗೃಹ ಸಚಿವರಾದ ಅಮಿತ್ ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ, ಈ ಎಲ್ಲಾ ಅಂಶಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆ ಪ್ರಶ್ನಿಸಿ ನ್ಯಾಯಾಲಯದ ಕದ ತಟ್ಟಲಾಗಿದೆ ಎಂದರು. ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ, ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು, ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.

Get real time updates directly on you device, subscribe now.

Comments are closed.

error: Content is protected !!