href=”https://www.tumkurvarthe.com/?attachment_id=16435″ rel=”attachment wp-att-16435″>
ತುಮಕೂರು: ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ತುಮಕೂರು ತಾಲ್ಲೂಕು ಗೂಳೂರು ಹೋಬಳಿ ಹರಳೂರು ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರನ್ನು ಸೆಳೆಯಲು ಚುನಾವಣಾ ಪರ್ವ- ದೇಶದ ಗರ್ವ ಎಂಬ ಘೋಷ ವಾಕ್ಯವಿರುವ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಯಿತು.
ನಂತರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೌತಮಾರನಹಳ್ಳಿ ಬಸವಣ್ಣನ ದೇವಸ್ಥಾನದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಚುನಾವಣಾ ಘೋಷ ವಾಕ್ಯಗಳನ್ನು ಕೂಗುತ್ತಾ ಏಪ್ರಿಲ್ 26 ರಂದು ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು, ಈ ವೇಳೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಂಕರ್ ಮಾತನಾಡಿ, ಭಾರತ ದೇಶವು ಪ್ರಜಾ ಪ್ರಭುತ್ವ ವ್ಯವಸ್ಥೆ ಹೊಂದಿದೆ, ಪ್ರಜಾ ಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕು ಎಂದರು.
ಮತದಾನ ಜಾಗೃತಿ ಕರಪತ್ರಗಳನ್ನು ಹಂಚಿ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಂದು ಮತದಾನ ಮಾಡಲು, ಚುನಾವಣಾ ಗರುತಿನಚೀಟಿ, ಆಧಾರ್ ಕಾರ್ಡ್, ನರೇಗಾ ಉದ್ಯೋಗ ಚೀಟಿ, ಪಡಿತರ ಚೀಟಿ, ಆಯುಷ್ಮಾನ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಪಾಸ್ ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ರಾಜ್ಯ ಮತ್ತು ಕೇಂದ್ರದ ಶಾಸಕರು ಮತ್ತು ಸಂಸದರಿಗೆ ನೀಡುವ ಗುರುತಿನ ಚೀಟಿ, ಜನಗಣತಿ ಇಲಾಖೆ ನೀಡಿದ ಗುರುತಿನ ಚೀಟಿ ಸೇರಿದಂತೆ 11 ರೀತಿಯ ಗುರುತಿನ ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆ ಹಾಜರುಪಡಿಸುವ ಮೂಲಕ ಮತದಾನ ಮಾಡಬಹುದು.
ಬರುವ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ತಮ್ಮ ಮತಗಟ್ಟೆಗೆ ಭೇಟಿ ನೀಡಿ ಮತದಾನ ಮಾಡಬೇಕೆಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಐಈಸಿ ಸಂಯೋಜಕರು, ಗ್ರಾಪಂನ ಗಂಗಣ್ಣ, ಸ್ವಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.
Comments are closed.