ಗ್ಯಾರಂಟಿ ಪಡೆದ್ರೆ ಸ್ವಾಭಿಮಾನ ಮಾರಿಕೊಂಡಂತೆ: ಜಗ್ಗೇಶ್

37

Get real time updates directly on you device, subscribe now.


ಬೆಂಗಳೂರು: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಯಲ್ಲಿ ತೊಡಗಿದ್ದಾರೆ, ಇನ್ನೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ, ಸೂರ್ಯ ನಾಮಪತ್ರ ಸಲ್ಲಿಸಿದ್ದು, ಇವರಿಗೆ ಹಿರಿಯ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನಗಳನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ನಟ ಜಗ್ಗೇಶ್, ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಜಾರಿ ಮಾಡುವುದಾಗಿ ಕಾಂಗ್ರೆಸ್ ನವರು ಹೇಳಿದ್ದರು, ಅದರಂತೆ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದಾರೆ ಎಂದು ಮಾತನಾಡಲು ಶುರು ಮಾಡಿದ ನಟ ಜಗ್ಗೇಶ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದಾರೆ.
ಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡುತ್ತಾರೆ, ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ, ಈ ಹಾರಗಳೇ ಗ್ಯಾರಂಟಿಗಳು, ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗಿದೆ, ಎಷ್ಟೇ ಫ್ರೀ ಸ್ಟೀಂ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ, ಫ್ರೀ ಬೀನ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆ ಎಂದು ನಟ ಜಗ್ಗೇಶ್ ಹೇಳಿದ್ದಾರೆ.

Get real time updates directly on you device, subscribe now.

Comments are closed.

error: Content is protected !!