ಬೆಂಗಳೂರು: ಮಂಡ್ಯದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ, ಬಿಜೆಪಿ ಸೇರ್ಪಡೆಯ ನಿರ್ಧಾರ ಪ್ರಕಟಿಸಿದ್ದ ಸುಮಲತಾ ಅಂಬರೀಶ್ ಶುಕ್ರವಾರ ಬೆಳಗ್ಗೆ 11.30ಕ್ಕೆ ಕಮಲ ಬಾವುಟ ಹಿಡಿಯಲಿದ್ದಾರೆ, ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸುಮಲತಾ ಬಿಜೆಪಿ ಸೇರಲಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುಮಲತಾ ಅಂಬರೀಶ್, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವನ್ನಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ, ಅದರಂತೆ ಈಗ ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಏಪ್ರಿಲ್ 5ರ ಶುಕ್ರವಾರದಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ, ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ತಮ್ಮ ಅಭಿಮಾನಿಗಳನ್ನು ಸುಮಲತಾ ಅವರು ಕೇಳಿಕೊಂಡಿದ್ದಾರೆ, ಪಕ್ಷ ಸೇರ್ಪಡೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿ ಇತರೆ ನಾಯಕರು ಇರಲಿದ್ದಾರೆ.
Get real time updates directly on you device, subscribe now.
Next Post
Comments are closed.