ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ಲೋಕಸಭಾ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಗೆ ಘೋಷಣೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸುಮಲತಾ ಅವರು ತಮ್ಮ ಮತ್ತು ರಾಜ್ಯದ ಇತರ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವವಹಿಸಲಿದ್ದಾರೆ, ಬಿಜೆಪಿ ಸೇರ್ಪಡೆ ನಂತರ ಪ್ರಚಾರಕ್ಕೆ ಆಹ್ವಾನಿಸುತ್ತೇನೆ ಎಂದು ಹೇಳಿದರು.
ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು, ಆ ನಿಟ್ಟಿನಲ್ಲಿ 400 ಸ್ಥಾನ ಗೆಲ್ಲುವ ಗುರಿ ಹೊಂದಲಾಗಿದೆ, ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಗುರುವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಜೊತೆಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು, ಈ ವೇಳೆ ಪಕ್ಷದ ನೂರಾರು ಕಾರ್ಯಕರ್ತರು ಕುಮಾರಸ್ವಾಮಿ ಜೊತೆಗಿದ್ದರು, ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು.
ಮಂಡ್ಯ ವಿವಿ ಆವರಣದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸಮಾವೇಶ ನಡೆಯಲಿದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗಿದ್ದರು.
Get real time updates directly on you device, subscribe now.
Prev Post
Next Post
Comments are closed.