ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ- 10 ಜನರ ರಕ್ಷಣೆ

32

Get real time updates directly on you device, subscribe now.


ಬೆಂಗಳೂರು: ನಗರದ ಆರ್.ಟಿ.ನಗರದಲ್ಲಿರುವ ಮಿರಾಕಲ್ ಕೂಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ್ದಾರೆ.
ಆರ್.ಟಿ.ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಹಲವು ಕಚೇರಿಗಳಿವೆ, ಇಲ್ಲಿ 30ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ, ಕಟ್ಟಡದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ, ಬೆಂಕಿ ನೋಡುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ಕೂಡಲೇ ಪೊಲೀಸರು ಹಾಗೂ ಅಗ್ನಿ ಶಾಮಕ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಕಟ್ಟಡದಲ್ಲಿನ ಡಿಜಿ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ, ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ಪೊಲೀನ್ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ, ಕಟ್ಟಡದಲ್ಲಿ ಸಿಲುಕಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ, ಯಾವುದೇ ಪ್ರಾಣಾಪಾಯವಾಗಿಲ್ಲ, ಕೆಲವರಿಗೆ ಬೆಂಕಿಯ ಹೊಗೆಯಿಂದ ಉಸಿರಾಟದ ಸಮಸ್ಯೆಯಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!