ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಈ ಪೈಕಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ.
ವಾಂತಿ- ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ 47 ವೈದ್ಯಕೀಯ ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಕಾಲರಾದ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ರಕ್ತದ ಮಾದರಿಯನ್ನು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ, ಇನ್ನು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ, ಬಿಎಂಸಿಆರ್ಐ ಹಾಸ್ಟೆಲ್ನಲ್ಲಿ ಕನಿಷ್ಠ ಸ್ವಚ್ಛತೆಯಿಲ್ಲದ ಬಗ್ಗೆ ಹಲವು ಬಾರಿ ದೂರು ವಿದ್ಯಾರ್ಥಿಗಳು ನೀಡಿದ್ದಾರೆ, ಯಾವುದು ಸರಿಯಾಗಿಲ್ಲ, ಈ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ, ಒಂದು ವಾರದಲ್ಲಿ ವರದಿ ಕೊಡಬೇಕು, ಅಲ್ಲದೆ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ, ಕೋಣೆಗಳು ಚಿಕ್ಕದಾಗಿವೆ, ಸರಿಯಾದ ವ್ಯವಸ್ಥೆ ಇಲ್ಲ, ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ, ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ, ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ, ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ, ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
Comments are closed.