ಶ್ರದ್ಧೆ, ಭಕ್ತಿಯಿಂದ ಶ್ರೀರಾಮನವಮಿ ಆಚರಣೆ

ಎಲ್ಲೆಲ್ಲೂ ಶ್ರೀರಾಮ ನಾಮ ಸ್ಮರಣೆ- ಆಂಜನೇಯನ ದೇಗುಲಗಳಲ್ಲೂ ಪೂಜೆ

24

Get real time updates directly on you device, subscribe now.


ತುಮಕೂರು: ಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯ ಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮ ನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರ ಸೇರಿದಂತೆ ಜಿಲ್ಲೆಯಾದ್ಯತ ಶ್ರೀರಾಮ ಮತ್ತು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಬುಧವಾರ ಮುಂಜಾನೆಯಿಂದಲೇ ಶ್ರೀರಾಮನಾಮ ಸ್ಮರಣೆ ಮೊಳಗಿದವು.

ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮನಮವಿ ಅಂಗವಾಗಿ ಶ್ರೀಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದವು.
ಅದೇ ರೀತಿಯ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ, ಶೆಟ್ಟಿಹಳ್ಳಿ ಗೇಟ್ ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಬಟವಾಡಿ ಆಂಜನೇಯ, ಪುಟ್ಟಾಂಜನೇಯ, ಆರ್ ಟಿ ಓ ಕಚೇರಿ ಬಳಿ ಇರುವ ಆಂಜನೇಯ ಸ್ವಾಮಿ ದೇವಾಲಯ, ಟೌನ್ ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ ದೇವಾಲಯ ಸೇರಿದಂತೆ ವಿವಿಧೆಡೆ ಇರುವ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿದ್ದು, ಶ್ರೀರಾಮ ನಮಮಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.

ಬಟವಾಡಿ ಸರ್ಕಲ್ ನಲ್ಲಿ ಮೂರ್ತಿ ಮತ್ತು ಶಶಿಹುಲಿಕುಂಟ್ ಮಠ್ ಹಾಗೂ ತುಮಕೂರು ವಿಶ್ವ ವಿದ್ಯಾಲಯದ ಮುಂಭಾಗ ನಾರಾಯಣಮೂರ್ತಿಯವರ ನೇತೃತ್ವದಲ್ಲಿ ಶ್ರೀರಾಮನವಮಿ ಆಚರಿಸಿದ್ದು, ಪೆಂಡಾಲ್ ಹಾಕಿ ಶ್ರೀರಾಮನ ಭಾವಚಿತ್ರ ಇಟ್ಟು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ವಿತರಿಸಿದರು.
ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು, ಶ್ರೀರಾಮನಮವಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆಯ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ಹಾಗೂ ಪ್ರಸಾದ ಹಂಚಲಾಯಿತು.

ಕೆಲವು ಸಂಘ ಸಂಸ್ಥೆಗಳು, ಯುವಕ ಸಂಘಗಳು ಸಹ ಶ್ರೀರಾಮನಮವಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಹಬ್ಬದ ವಿಶೇಷವಾಗಿ ಪಾನಕ, ಮಜ್ಜಿಗೆ, ಹೆಸರು ಬೇಳೆ, ಅನ್ನ ದಾಸೋಹ ವ್ಯವಸ್ಥೆ ಮಾಡಿದ್ದು ಗಮನ ಸೆಳೆಯಿತು,
ಜಾತಿ, ಮತ ಮೀರಿದ, ಸೌಹಾರ್ದತೆಯ ಸಂಕೇತವಾಗಿರುವ ಶ್ರೀರಾಮ ನವಮಿಯನ್ನು ಮುಸ್ಲಿಂ ಬಾಂಧವರು ಸೇರಿ ಆಚರಿಸಿದ್ದು ಈ ಬಾರಿಯ ವಿಶೇಷವಾಗಿತ್ತು, ನಗರದ ಬಿ.ಹೆಚ್.ರಸ್ತೆಯುದ್ದಕ್ಕೂ ಭಕ್ತಾದಿಗಳು ಶ್ರೀರಾಮನ ಭಾವಚಿತ್ರ ಇಟ್ಟು ಪೆಂಡಾಲ್ ಹಾಕಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿದ್ದವು.

Get real time updates directly on you device, subscribe now.

Comments are closed.

error: Content is protected !!