ತಪ್ಪದೆ ಉತ್ಸಾಹದಿಂದ ಮತದಾನ ಮಾಡಿ: ಡೀಸಿ

31

Get real time updates directly on you device, subscribe now.


ತುಮಕೂರು: ಬರುವ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಲ್ಲಾ ಮತದಾರರು ತಮ್ಮ ಮತಗಟ್ಟೆಗೆ ಭೇಟಿ ನೀಡಿ ಉತ್ಸಾಹದಿಂದ ಮತದಾನ ಮಾಡುವ ಮೂಲಕ ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು.

ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿ, ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ, ಮತ ಪತ್ರ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.
ತುಮುಲ್ ಎಂಡಿ ಶ್ರೀನಿವಾಸನ್ ಮಾತನಾಡಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದರ ಮೂಲಕ ಉತ್ತಮ ವ್ಯಕ್ತಿಯನ್ನು ಆರಿಸಬೇಕು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧಿಕಾರಿ, ಸಿಬ್ಬಂದಿ, ಹಾಲು ಮಾರಾಟ ರೀಟೇಲ್, ಡಿಸ್ಟ್ರಿಬ್ಯೂಟರ್ಸ್, ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದನಾ ಸಹಕಾರ ಸಂಘ, ಮಹಿಳಾ ಸಂಘಗಳ ಕಾರ್ಯದರ್ಶಿಗಳು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಜಾಥಾ ಕಾರ್ಯಕ್ರಮವು ಜ್ಯೂನಿಯರ್ ಕಾಲೇಜು ಮೈದಾನದಿಂದ ಟೌನ್ ಹಾಲ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ, ನಮ್ಮ ಮತ ದೇಶಕ್ಕೆ ಹಿತ ಘೋಷ ವಾಕ್ಯಗಳ ಫಲಕಗಳನ್ನು ಹಿಡಿದು ಸಾಗುವ ಮೂಲಕ ಮತದಾನ ಜಾಗೃತಿ ಮೂಡಿಸಿತು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ತೋಟಗಾರಿಕೆ ಉಪ ನಿರ್ದೇಶಕ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅಶೋಕ್ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿ, ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!