ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹೆಣ್ಣು ಮಕ್ಕಳ ಕೊಲೆ, ಅತ್ಯಾಚಾರ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ, ಈ ಸರ್ಕಾರದಲ್ಲಿ ಮಹಿಳೆಯರಿಗೆ ಸರಿಯಾದ ಗೌರವ ಸಿಗುತ್ತಿಲ್ಲ, ಮಹಿಳೆಯರಿಗೆ ಸುರಕ್ಷತೆಯಿಲ್ಲ, ಇದು ಮಹಿಳಾ ವಿರೋಧಿ ಸರ್ಕಾರ ಎಂದು ರಾಜ್ಯ ಬಿಜೆಪಿ ಪ್ರಕೋಷ್ಟಗಳ ಸಂಯೋಜಕ ದತ್ತಾತ್ರಿ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿ 10 ಬಾರಿ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾನೆ, ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಈ ತಿಂಗಳ 24ರಂದು ಮಧ್ಯಾಹ್ನ 1 ಗಂಟೆಗೆ ಕೆ.ಬಿ.ಕ್ರಾಸ್ ನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಭಾಗವಹಿಸುವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ನ ಮುಖಂಡರುಪಾಲ್ಗೊಳ್ಳುವರು ಎಂದು ಹೇಳಿದರು.
ಮುಖಂಡರಾದ ಬಿ.ಹೆಚ್.ಅನಿಲ್ ಕುಮಾರ್, ಎಸ್.ಶಿವಪ್ರಸಾದ್, ದೊಡ್ಡಮನೆ ಗೋಪಾಲಗೌಡ, ವಕ್ತಾರ ಟಿ.ಆರ್.ಸದಾಶಿವಯ್ಯ, ಮಾಧ್ಯಮ ಪ್ರಮುಖ್ ಜೆ.ಜಗದೀಶ್ ಹಾಜರಿದ್ದರು.
ಲವ್ ಜಿಹಾದ್ ಗೆ ಒಪ್ಪದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಲವ್ ಜಿಹಾದ್ ನಡೆದಿಲ್ಲ ಎಂದು ಜಿಹಾದಿಗಳ ರಕ್ಷಣೆಗೆ ನಿಂತಿದ್ದಾರೆ, ಮುಸ್ಲಿಂ ಮತಾಂಧರು ಹಾಡು ಹಗಲೇ ನೇಹಾ ಅವರನ್ನು ಇರಿದು ಕೊಂದಿರುವ ಘಟನೆಯಿಂದ ಇಡೀ ರಾಜ್ಯವೇ ದಿಗ್ಬ್ರೆಮೆಗೆ ಒಳಗಾಗಿದೆ, ಸಿಎಂ ಮತ್ತು ಗೃಹ ಸಚಿವರ ನಾಚಿಕೆಗೆಟ್ಟ ಹೇಳಿಕೆ ಬೇಸರ ತರಿಸಿದೆ.
> ಆರ್.ಅಶೋಕ್, ವಿರೋಧ ಪಕ್ಷದ ನಾಯಕ
Comments are closed.