ಕೊಲೆ ಆರೋಪಿಗೆ ಮರಣ ದಂಡನೆ ಶಿಕ್ಷೆ ನೀಡಿ

ತುಮಕೂರಿನಲ್ಲಿ ನೇಹಾ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

37

Get real time updates directly on you device, subscribe now.


ತುಮಕೂರು: ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ.
ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ, ಕೆಎಲ್ ಇ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿ ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃತ್ಯ ಎಸಗಿರುವ ಆರೋಪಿಗೆ ಮರಣದಂಡನೆ ಶಿಕ್ಷೆ ನೀಡಿ ವಿದ್ಯಾರ್ಥಿನಿ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾ ಸಂಚಾಲಕ್ ಗುರುಪ್ರಸಾದ್, ಕಾರ್ಯಕರ್ತರಾದ ದೀಪಕ್, ನಂದನ್, ಸಿದ್ದೇಶ್, ಪ್ರೀತಿ ವಿ. ಆರಾಧ್ಯ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Get real time updates directly on you device, subscribe now.

Comments are closed.

error: Content is protected !!