ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್ ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ (24) ಎಂದು ಗುರುತಿಸಲಾಗಿದೆ, ಪರೀಕ್ಷೆಗೆ ತರಳಿದ್ದ ವೇಳೆ ದುಷ್ಕರ್ಮಿಯೊಬ್ಬ ಏಕಾಏಕಿ ಕುತ್ತಿಗೆಗೆ ಚಾಕು ಹಾಕಿದ್ದರಿಂದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ, ಕೂಡಲೇ ಸಹಪಾಠಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ಚಿಕಿತ್ಸೆ ಫಲಿಸದೆ ನೇಹಾ ಮೃತಪಟ್ಟಿದ್ದಾಳೆ, ಇನ್ನೂ ಕಿಮ್ಸ್ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು, ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಒಂದು ತಾಸಿನಲ್ಲಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದೆ, ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ವಿದ್ಯಾನಗರ ಪೊಲೀಸರು ತಿಳಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ, ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿನಿ ನೇಹಾ ಕೊಂದ ಕ್ರಿಮಿ
Get real time updates directly on you device, subscribe now.
Prev Post
Next Post
Comments are closed.