ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಸದ್ಯ ಜಾಮೀನ ಮೇಲೆ ಹೊರ ಇರುವ ಮುರುಘಾಶ್ರೀ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂ ಕೋರ್ಟ್ ಸೂಚಿನೆ ನೀಡಿದೆ, ಮುರುಘಾ ಮಠದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಕಳೆದ ಸೆಪ್ಟಂಬರ್ 2 ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗದಲ್ಲಿರುವ ಮುರುಘಾ ಮಠದಲ್ಲಿಯೇ ಇದ್ದಾಗ ರಾತ್ರಿ ವೇಳೆ ಮಠಕ್ಕೆ ದಾಳಿ ನಡೆಸಿದ್ದ ಪೊಲೀಸರು ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳನ್ನು ಬಂಧಿಸಿದ್ದರು.
ಕೆಲ ತಿಂಗಳ ಹಿಂದೆ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಹಲವು ಷರತ್ತುಗಳೊಂದಿಗೆ ಜಾಮೀಜು ನೀಡಿತ್ತು, ಬಳಿಕ ಅರ್ಜಿದಾರರು ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಿ ನಾಶಪಡಿಸಬಹುದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು, ಮಂಗಳವಾರ ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶ ನೀಡಿದೆ.
Comments are closed.