ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ಸಾವಿರಾರು ಭಕ್ತರು ಭಾಗಿ- ಎಲ್ಲೆಡೆ ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ

60

Get real time updates directly on you device, subscribe now.


ತುಮಕೂರು: ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನಗರದ ಹೊರ ವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ರಥೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿದವು, ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಮಧ್ಯಾಹ್ನ 1.20 ಕ್ಕೆ ರಥಕ್ಕೆ ದೇವರನ್ನು ಕೂರಿಸಿದ ಬಳಿಕ ಗರುಡ ರಥದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು, ರಥದ ಗಾಲಿ ಮುಂದಕ್ಕೆ ಹರಿಯುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರ, ಜೈಕಾರ ಘೋಷಣೆ ಮುಗಿಲು ಮುಟ್ಟಿದವು.

ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ಸಲ್ಲಿಸಿದರು, ಈ ಬಾರಿ ರಥಕ್ಕೆ 100 ಅಡಿ ಉದ್ದದ ಕೊಬ್ಬರಿ ಹಾರ ಹಾಕಲಾಗಿತ್ತು, ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್ ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು.

ರಥೋತ್ಸವದಲ್ಲಿ ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ರೆವಿನ್ಯೂ ಇನ್ಸ್ಪೆಕ್ಟರ್ ಗಳಾದ ಶಿವಾನಂದ ರೆಡ್ಡಿ, ಅಜೇಯ್, ಶೆಟ್ಟಿಹಳ್ಳಿ ಗ್ರಾಮ ಆಡಳಿತಾಧಿಕಾರಿ ರವಿಕುಮಾರ್ ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!