ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯ

ಸಿ ಆರ್ ಪಿ ಎಫ್ ಯೋಧರು, ಪೊಲೀಸರ ಬಿಗಿ ಭದ್ರತೆ

26

Get real time updates directly on you device, subscribe now.


ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಇವಿಎಂ ಯಂತ್ರಗಳನ್ನು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂ ಗಳಲ್ಲಿ ಇಡಲಾಗಿದೆ.
ತುಮಕೂರು ವಿಶ್ವ ವಿದ್ಯಾಲಯದ ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂ ನಲ್ಲಿ ತಿಪಟೂರು, ಚಿಕ್ಕನಾಯಕನ ಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಇವಿಎಂ ಯಂತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂ ನಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇರಿಸಲಾಗಿದ್ದು, ಈ ಮೂಲಕ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ಸೇರಿದ್ದು, ಈ ಎರಡೂ ಸ್ಟ್ರಾಂಗ್ ರೂಂ ಗಳಿಗೆ ಸಿ ಆರ್ ಪಿ ಎಫ್ ಯೋಧರ ಭದ್ರತೆ ಒದಗಿಸಲಾಗಿದೆ.

ಜೂನ್ 4ರ ವರೆಗೆ ಈ ಎರಡು ಸ್ಟ್ರಾಂಗ್ ರೂಂ ಗಳು ಸಿಆರ್ ಪಿಎಫ್ ಯೋಧರು ಹಾಗೂ ಸಿಸಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಇರಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಜಿಲ್ಲಾಧಿಕಾರಿ ಪರಿಶೀಲನೆ
ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿರುವ ಭದ್ರತಾ ಕೊಠಡಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು,
ನಂತರ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವ ವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂ ನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂ ಗಳ ಜವಾಬ್ದಾರಿಯನ್ನು ಸಿಆರ್ ಪಿಎಫ್ ನವರಿಗೆ ಹಸ್ತಾಂತರಿಸಲಾಗಿದೆ, ಜೂ. 4 ರ ವರೆಗೆ ಸಿಆರ್ಪಿಎಫ್ ನಿಯಂತ್ರಣದಲ್ಲಿ ಈ ಸ್ಟ್ರಾಂಗ್ ರೂಂ ಇರುತ್ತವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯಶಸ್ವಿಯಾಗಿ, ಶಾಂತಿಯುತವಾಗಿ, ವ್ಯವಸ್ಥಿತವಾಗಿ ನಡೆಯಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು, ಸಿಬ್ಬಂದಿ ಹಾಗೂ 22 ಲಕ್ಷ ಮತದಾರರು, ಸಾರ್ವಜನಿಕರು, ಮಾಧ್ಯಮದವರಿಗೆ ಜಿಲ್ಲಾಡಳಿತ ಪರವಾಗಿ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಹಾಗೆಯೇ ಎಲ್ಲಾ ರಾಜಕೀಯ ಪಕ್ಷಗಳವರು ಸಹ ಚುನಾವಣೆಯ ಯಶಸ್ವಿಗೆ ಸಹಕಾರ ನೀಡಿದ್ದಾರೆ, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ಚಟುವಟಿಕೆ, ಪಾಲಿಕೆ ಅಧಿಕಾರಿಗಳು ನಡೆಸಿದ ಜಾಗೃತಿ ಜಾಥಾ ಸಹ ಪ್ರಮುಖ ಕಾರಣವಾಗಿದ್ದು, ಅವರಿಗೂ ಸಹ ಧನ್ಯವಾದ ಹೇಳುತ್ತೇನೆ ಎಂದರು.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಎಫ್ ಎಸ್ ಟಿ ತಂಡ ಕಾರ್ಯ ನಿರ್ವಹಿಸುತ್ತಿರುತ್ತದೆ, ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಕಾರ್ಯ ನಿರ್ವಹಿಸುತ್ತವೆ ಎಂದು ಮಾಹಿತಿ ನೀಡಿದರು.

ಶೇ.77.99 ರಷ್ಟು ಮತದಾನ
ತುಮಕೂರು ಲೋಕಸಭಾ ಚುನಾವಣೆಯಲ್ಲಿ 12,95,732 ಮತದಾರರು ಮತ ಚಲಾಯಿಸುವ ಮೂಲಕ ಶೇ.77.99 ರಷ್ಟು ಮತದಾನವಾಗಿದೆ, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇ.0.7 ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದೆ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಆಗಿದೆ, 2ನೇ ಅತಿ ಹೆಚ್ಚು ಮತದಾನ ತುಮಕೂರು ಗ್ರಾಮಾಂತರದಲ್ಲಿ ಆಗಿದೆ, ತುಮಕೂರು ನಗರದಲ್ಲಿ 2019ಕ್ಕೆ ಹೋಲಿಸಿದಾಗ ಈ ಬಾರಿ ಶೇ.2 ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದ್ದು, ಈ ಬಾರಿ ಶೇ.67.38 ರಷ್ಟು ಮತದಾನವಾಗಿದೆ ಎಂದರು.

ಎಸ್ಪಿ ಪರಿಶೀಲನೆ

ಸ್ಟ್ರಾಂಗ್ ರೂಂ ಗಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ. ಮಾತನಾಡಿ, ತುಮಕೂರು ಲೋಕಸಭೆ ಸಾರ್ವತ್ರಿಕ ಚುನಾವಣೆ ಏ.26 ರಂದು ಯಶಸ್ವಿಯಾಗಿ ಮುಗಿದಿದ್ದು, ತುಮಕೂರು ವಿವಿ ವಿಜ್ಞಾನ ಕಾಲೇಜಿನಲ್ಲಿ 4 ಕ್ಷೇತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 4 ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿದ್ದು, ಈ ಸ್ಟ್ರಾಂಗ್ ರೂಂ ಗಳಿಗೆ ಸಿವಿಲ್ ಪೊಲೀಸರು ಹಾಗೂ ಸಿಆರ್ ಪಿಎಫ್ ಯೋಧರ ಭದ್ರತೆ ಒದಗಿಸಲಾಗಿದೆ, ಸಿವಿಲ್ ಪೊಲೀಸರು ಮತ್ತು ಸಿಆರ್ ಪಿಎಫ್ ಪೊಲೀಸರು ಜೂ. 4ರ ವರೆಗೆ ಪಾಳಿ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!