ನರಿಗೇಹಳ್ಳಿಯಲ್ಲಿ ನೀರಿಗೆ ಬರ- ಗ್ರಾಮಸ್ಥರ ಪ್ರತಿಭಟನೆ

29

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಶೆಟ್ಟಿಗೊಂಡನ ಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ನರಿಗೇಹಳ್ಳಿಯಲ್ಲಿ ನೀರಿಗೆ ತತ್ವಾರವಾಗಿದೆ, ಕಳೆದ ಐದಾರು ದಿನಗಳಿಂದ ಗ್ರಾಮ ಪಂಚಾಯ್ತಿ ವತಿಯಿಂದ ನೀರು ಬಿಟ್ಟಿಲ್ಲ, ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೇ ತೀವ್ರ ತೊಂದರೆಯುಂಟಾಗಿದೆ ಎಂದು ಆರೋಪಿಸಿ ನರಿಗೇಹಳ್ಳಿಯ ಗ್ರಾಮಸ್ಥರು ಶೆಟ್ಟಿಗೊಂಡನ ಹಳ್ಳಿ ಗ್ರಾಮ ಪಂಚಾಯ್ತಿಯ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ನೀರಿನ ಸಮಸ್ಯೆ ತೀವ್ರವಾಗುತ್ತಿದೆ ಎಂದು ಗ್ರಾಮ ಪಂಚಾಯ್ತಿಯ ಪಿಡಿಓ ಅವರಿಗೆ ಸಾಕಷ್ಟು ಸಾರಿ ಹೇಳಿದ್ದರೂ ನೀರು ಸರಬರಾಜು ಮಾಡಲು ಬೇಜವಾಬ್ದಾರಿತನ ತೋರುತ್ತಿದ್ದಾರೆ, ದೂರವಾಣಿ ಕರೆ ಮಾಡಲು ಪ್ರಯತ್ನಿಸಿದರೆ ಅವರ ಮೊಬೈಲ್ ಸ್ವಿಚ್ ಆಫ್ ಅಂತ ಬರುತ್ತದೆ, ಯಾರಿಗೆ ತಮ್ಮ ನೋವು ಹೇಳಬೇಕೆಂದೇ ತೋಚುತ್ತಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಕೂಡಲೇ ನೀರಿನ ವ್ಯವಸ್ಥೆ ಮಾಡದಿದ್ದಲ್ಲಿ ತುರುವೇಕೆರೆ ಪಟ್ಟಣದಲ್ಲಿರುವ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಯ ಮುಂದೆಯೇ ಪ್ರತಿಭಟನೆ ಮಾಡುವುದಾಗಿ ಅಲ್ಲಿನ ಮಹಿಳೆಯರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!