ತಿಂಗಳಾಂತ್ಯಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಪೂರ್ಣಗೊಳಿಸಿ

12

Get real time updates directly on you device, subscribe now.


ತುಮಕೂರು: ನಗರದಲ್ಲಿ ನಿರ್ಮಾಣವಾಗಿರುವ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಮೇ ಮಾಹೆ ಅಂತ್ಯಕ್ಕೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ದೇವರಾಜ ಅರಸು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕೆ ಎಸ್ ಆರ್ ಟಿ ಸಿ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತ್ರಿವೇಣಿ ಅವರಿಂದ ಕಾಮಗಾರಿ ಪ್ರಗತಿ ಮಾಹಿತಿ ಪಡೆದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಹಗಲಿರುಳು ಕೆಲಸಗಾರರನ್ನು ಪಾಳಿ ಆಧಾರದ ಮೇಲೆ ನಿಯೋಜಿಸಿ ಬಾಕಿ ಇರುವ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ ತ್ರಿವೇಣಿ ಲಿಫ್ಟ್ ಕಾರ್ಯಾಚರಣೆ, ಪ್ಲಂಬಿಂಗ್ ಕೆಲಸ, ಮುಂಭಾಗದ ಆವರಣ ಗೋಡೆ, ಶೌಚಾಲಯ, ವಿದ್ಯುತ್ ಸಂಪರ್ಕ, ಫಾಲ್ ಸೀಲಿಂಗ್, ಸೈನ್ ಬೋರ್ಡ್, ಸಿಸಿಟಿವಿ ಕ್ಯಾಮೆರಾ, ಅಗ್ನಿಶಾಮಕ ಯಾಂತ್ರಿಕ ಕೆಲಸ, ಹೊರ ಹೋಗುವ ಹಾಗೂ ಒಳ ಬರುವ ಮಾರ್ಗ ನಿರ್ಮಾಣ, ಲ್ಯಾಂಡ್ ಸ್ಕೇಪಿಂಗ್ ಕೆಲಸ, ಅಂತಿಮ ಕೋಟ್ ಪೇಂಟ್, ರ್ಯಾಂಪ್ ಕೆಲಸ, ಸ್ಟ್ರಕ್ಚರಲ್ ಮೆರುಗು ಕೆಲಸ, ಟಿಸಿ ಪಾಯಿಂಟ್ ಮತ್ತು ಪೊಲೀಸ್ ಚೌಕಿ ನಿರ್ಮಾಣ ಕಾಮಗಾರಿ ಬಾಕಿ ಇದ್ದು, ಮೇ 30ರೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!