ಬೇವು ಲೇಪಿತ ಯೂರಿಯಾ ಸಾಗಣೆ- ಲಾರಿ ವಶ

32

Get real time updates directly on you device, subscribe now.


ತುಮಕೂರು: ಬೇವು ಲೇಪಿತ ಯೂರಿಕಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆ ಕಾರ್ಯಾಚರಣೆ ನಡೆಸಿ ವಶ ಪಡಿಸಿಕೊಂಡಿದ್ದಾರೆ.
ನಗರದ ಹೊರ ವಲಯದ ರಂಗಾಪುರ- ಅಂತರಸನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಬೇವು ಲೇಪಿತ ಯೂರಿಯಾ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಟಿ.ಆರ್. ಕೃಷ್ಣಕುಮಾರ್ ನಿರ್ದೇಶದನ ಮೇರೆಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ನಾಗರಾಜು ಸಿ.ಗಂಗನಗೌಡರ್, ಸಿಟಿಓ ನಾಗರಾಜು.ಎಸ್, ಸಿಟಿಐ ಹರ್ಷಿತ ಅವರು ಲಾರಿ ತಡೆದು ದಾಖಲಾತಿ ಪರಿಶೀಲಿಸಿದಾಗ ದಾಖಲಾತಿ ಪ್ರಕಾರ ಸರಕಾದ ಕ್ಯಾಲ್ಸಿಯಂ ಕಾರ್ಬೋನೆಟ್ ಮತ್ತು ವಾಸ್ತವ ಸರಕಾದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಗಂಗಾವತಿಯಿಂದ ತುಂಬಿಕೊಂಡು ಸೇಲಂ, ತಮಿಳುನಾಡಿಗೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಲಾರಿ ವಶಕ್ಕೆ ಪಡೆದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ರಸಗೊಬ್ಬರ ಸಂಬಂಧ ಪರಿಶೀಲನೆಗಾಗಿ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟ ರಂಗಪ್ಪ ಅವರಿಗೆ ಮಾಡಿದ ಮನವಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಸಂಬಂಧ ದಾಖಲಾತಿ ಪರಿಶೀಲಿಸಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೃಷಿ ಬಳಕೆಗೆ ಮೀಸಲಾದ ಸರ್ಕಾರದ ಸಹಾಯ ಧನದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೈಗಾರಿಕಾ ಉದ್ದೇಶಕ್ಕೆ ಅಂತಾರಾಜ್ಯ ಸಾಗಾಣಿಕೆ ನಿಷೇಧವಿದ್ದರೂ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದ್ದು, ಈ ಸಂಬಂಧ ಹೆಚ್ಚಿನ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪನವರು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!