ಬಸ್ಸಿಗೆ ದ್ವಿಚಕ್ರವಾಹನ ಡಿಕ್ಕಿ- ಓರ್ವ ಸಾವು

46

Get real time updates directly on you device, subscribe now.


ಕೊಡಿಗೇನಹಳ್ಳಿ: ಚಲಿಸುತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕೊಡಿಗೇನಹಳ್ಳಿ ಹೊರ ವಲಯದಲ್ಲಿರುವ ವಿಜಯಾನಂದಿ ಕ್ರಾಸ್ ಬಳಿ ಕೆಎಸ್ ಆರ್ ಟಿ ಸಿ ಬಸ್ ಗೆ ಗೌರಿಬಿದನೂರು ತಾಲೂಕಿನ ವಾಟದಹೊಸಳ್ಳಿ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಮುಂಭಾಗದ ಚಕ್ರಕ್ಕೆ ಸಿಲುಕಿದ ಅನಿಲ್ (23) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗೌರಿಬಿದನೂರು ತಾಲೂಕಿನ ವಾಟದಹೊಸಳ್ಳಿ ಗ್ರಾಮದ ಮಹೇಂದ್ರ (23), ಚರಣ್ ಬಿನ್ ಆದಿ ನಾರಾಯಣಪ್ಪ (17) ಎಂಬುವವರು ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ, ಸ್ಥಳಕ್ಕೆ ಸಿಪಿಐ ರವಿ ಹಾಗೂ ಪಿಎಸೈ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!