625ಕ್ಕೆ 624 ಅಂಕ ಪಡೆದ ಹರ್ಷಿತಾ

ಶಿರಾ ಪಟ್ಟಣದ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಟಾಪರ್

37

Get real time updates directly on you device, subscribe now.


ಶಿರಾ: ವಿದ್ಯಾರ್ಥಿಗಳು ಬಹಳ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಎಸ್ ಎಸ್ ಎಲ್ ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಶಿರಾ ಪಟ್ಟಣದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅತ್ಯುನ್ನತ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಹರ್ಷಿತಾ.ಡಿ.ಎಂ. ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ, ಶಿರಾ ಪಟ್ಟಣದ ಶ್ರೀವಾಸವಿ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿರುವ ಹರ್ಷಿತಾ.ಡಿ.ಎಂ. 625 ಕ್ಕೆ 624 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ತಂದೆ ಮಂಜುನಾಥ್ ಹಾಗೂ ತಾಯಿ ಮಂಜುಳಾ ಮಗಳ ಸಾಧನೆಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಸೇರುವ ಶಿರಾ ಪಟ್ಟಣದ ಶ್ರೀವಾಸವಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಿ ಹರ್ಷಿತಾ ಸಾಧನೆಗೆ ಶಾಲಾಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಈ ಬಾರಿ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಶೇ.93.23 ಫಲಿತಾಂಶ ಬಂದಿದ್ದು , ತುಮಕೂರು ಶೈಕ್ಷಣಿಕ ಜಿಲ್ಲೆ 89.43 ರಷ್ಟು ಫಲಿತಾಂಶ ಲಭಿಸಿದೆ.

Get real time updates directly on you device, subscribe now.

Comments are closed.

error: Content is protected !!