ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಶ್ರೀನಿವಾಸ್ ಗೆಲ್ಲಿಸಿ

39

Get real time updates directly on you device, subscribe now.


ತುಮಕೂರು: ರಾಜ್ಯದ ವಿಧಾನ ಪರಿಷತ್ ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು, ಆಗ್ನೇಯ ಶಿಕ್ಷೇಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮನವಿ ಮಾಡಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ ಅವರು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದು, ತಳಮಟ್ಟದಿಂದ ಶಿಕ್ಷಕರ ಸಮಸ್ಯೆ ಬಲ್ಲವರಾಗಿದ್ದಾರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಶಿಕ್ಷಕರ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ 23,514 ಮಂದಿ ಮತದಾರರು ನೋಂದವಣೆಯಾಗಿದ್ದು, ತುಮಕೂರು ಜಿಲ್ಲೆಯಿಂದ 7599, ಚಿತ್ರದುರ್ಗ ಜಿಲ್ಲೆಯಿಂದ 4615, ಕೋಲಾರ ಜಿಲ್ಲೆಯಿಂದ 4149, ದಾವಣಗೆರೆ ಜಿಲ್ಲೆಯಿಂದ 3984, ಚಿಕ್ಕಬಳ್ಳಾಪುರ ಜಿಲ್ಲೆಯಿಂದ 3510 ಮತದಾರರು ನೋಂದಾಯಿಸಿದ್ದಾರೆ ಎಂದರು.
ಎೂನ್ 3 ರಂದು ನಡೆಯಲಿರುವ 6 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರೆಲ್ಲರನ್ನು ಗೆಲ್ಲಿಸಬೇಕು ಎಂದು ಕೋರಿದರು.
ಜೂನ್ 13 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವರು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಸಚಿವರು, ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

2018 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರು ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರಿಗೆ ಸಂಬಂಧಪಟ್ಟಂತೆ ಅಂದಿನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ತನ್ವೀರ್ ಸೇಠ್ ಅವರು ಶಿಕ್ಷಕರ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಶಿಕ್ಷಣ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ನಿರಂತವಾಗಿ 2 ಬಾರಿ ಸಭೆ ನಡೆಸಿ ಸಮಸ್ಯೆಗೆ ಸ್ಪಂದಿಸಿದ್ದರು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ, ಇದು ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಪ್ರಸಕ್ತ ಸಾಲಿನ ಅಯವ್ಯಯದಲ್ಲಿ 44,422 ಕೋಟಿ ರೂ. ಹಣವನ್ನು ಶಿಕ್ಷಕ ಕ್ಷೇತ್ರಕ್ಕೆ ಮೀಸಲಿಟ್ಟಿದ್ದು, ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 850 ಕೋಟಿ ಅನುದಾನ ಒದಗಿಸಿದ್ದಾರೆ, ಇದರೊಂದಿಗೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಂಡಿದ್ದಾರೆ, ಶಿಕ್ಷಕರು, ಉಪನ್ಯಾಸಕರ ಅನೇಕ ಸಮಸ್ಯೆ ಬಗೆಹರಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಷಣ್ಮುಖಪ್ಪ, ದಿವಾಕರ್, ಲೋಕೇಶ್, ಸುಜಾತ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!