ತುಮಕೂರು: ಜಿಲ್ಲೆಯಲ್ಲಿ ಈವರೆಗೂ 15 ಮೇವು ಬ್ಯಾಂಕ್ ತೆರೆಯಲಾಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಹೊಸ ಮೇವು ಬ್ಯಾಂಕ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿಗೆ ಮಂಗಳವಾರ ಭೇಟಿ ನೀಡಿ ಗ್ರಾಮದ ಶ್ರೀಆಂಜನೇಯ ದೇವಸ್ಥಾನದ ಬಳಿಯಿರುವ ಮೇವು ಬ್ಯಾಂಕ್ ಪರಿಶೀಲಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೇ 2 ರಿಂದ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ, ಆದರೆ ಕೊರಟಗೆರೆ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿರುವುದರಿಂದ ಜಾನುವಾರುಗಳ ಮೇವು, ರೈತರ ಸಮಸ್ಯೆ, ನೀರಿನ ಸಮಸ್ಯೆ ಅರಿತು ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಕೊರಟಗೆರೆ ತಾಲ್ಲೂಕಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ.ಆತ್ಮಾರಾಮ್ ಎಂ ಶೆಟ್ಟಿ, ಉಪ ತಹಶೀಲ್ದಾರ್ ಅನಿತಾ, ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗರಾಜು ಇತರರು ಇದ್ದರು.
ಬೇಡಿಕೆ ಬಂದ್ರೆ ಹೊಸ ಮೇವು ಬ್ಯಾಂಕ್
ಜಿಲ್ಲೆಯ ವಿವಿಧ ಮೇವು ಬ್ಯಾಂಕ್ ಗಳಿಗೆ ಜಿಲ್ಲಾಧಿಕಾರಿ ಭೇಟಿ
Get real time updates directly on you device, subscribe now.
Prev Post
Next Post
Comments are closed.