ಸೇತುವೆ ಪೂರ್ಣಗೊಳ್ಳುವವರೆಗೆ ಬಸ್ ಸಂಚಾರ

20 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ ಗಳ ಸಂಚಾರ ಕಲ್ಪಿಸಿ: ಡೀಸಿ

30

Get real time updates directly on you device, subscribe now.


ತುಮಕೂರು: ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಬಸ್ ನಿಲ್ದಾಣದಿಂದ ಗುಬ್ಬಿ ಗೇಟ್ ಮಾರ್ಗವಾಗಿ ರಾಷ್ಟ್ರಿಯ ಹೆದ್ದಾರಿ ಮೂಲಕ ಶಿರಾಗೇಟ್ ವರೆಗೂ ಪ್ರತಿ 20 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ ಗಳ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಕಾಮಗಾರಿ ಪ್ರಗತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ದಿನ ದುಡಿಯುವ ಕಾರ್ಮಿಕ ವರ್ಗದವರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮತ್ತು ತುಮಕೂರು ನಗರದ ಬಸ್ ನಿಲ್ದಾಣದಿಂದ ಗುಬ್ಬಿಗೇಟ್ ಮಾರ್ಗವಾಗಿ ರಾಷ್ಟ್ರಿಯ ಹೆದ್ದಾರಿ ಮೂಲಕ ಶಿರಾಗೇಟ್ ವರೆಗೂ ಪ್ರತಿ 20 ನಿಮಿಷಕ್ಕೊಮ್ಮೆ ಪ್ರತಿ ದಿನ ಬೆಳಗ್ಗೆ 7 ರಿಂದ ನಗರ ಸಾರಿಗೆ ಮಿನಿ ಬಸ್ ಗಳ ವ್ಯವಸ್ಥೆ ಕಲ್ಪಿಸಿ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ-4ರ ಸರಪಳಿ 71.29 ಕಿ.ಮೀ. ನಲ್ಲಿ ಅಮಾನಿಕರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಪ್ರಸ್ತುತ ಫೌಂಡೇಷನ್ ಬೆಡ್ ವರೆಗೂ ಕಾಂಕ್ರಿಟ್ ಪ್ರಗತಿಯಾಗಿರುವ ಬಗ್ಗೆ ಪರಿಶೀಲಿಸಿದ ಅವರು ಕಾಮಗಾರಿ ಪೂರ್ಣಗೊಳ್ಳಲು ಸುಮಾರು 120 ದಿನ ಅಗತ್ಯವಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು, ಕೈಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿ ಬಳಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕಾಮಗಾರಿ ಪೂರ್ಣಗೊಳ್ಳುವವರೆಗೂ ಪ್ರತೀದಿನ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ವರ್ತುಲ ರಸ್ತೆ ಮೂಲಕ ಸಂಚರಿಸುತ್ತಿರುವ ಭಾರಿ ವಾಹನಗಳು ಸುಗಮವಾಗಿ ಸಂಚಾರಿಸುವ ನಿಟ್ಟಿನಲ್ಲಿ ರಸ್ತೆಯನ್ನು ಸಮತಟ್ಟುಗೊಳಿಸಬೇಕು ಹಾಗೂ ಮಳೆ ಬಂದಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತೆ ಅಶ್ವಿಜ, ಡಿಡಿಎಲ್ ಆರ್ ನಿರಂಜನ್.ಎಂ.ಎನ್, ಡಿವೈಎಸ್ ಪಿ ಚಂದ್ರಶೇಖರ್, ಎಇಇ ವಿನಯ್, ಉಪ ವಿಭಾಗಾಧಿಕಾರಿ ಸಪ್ತಶ್ರೀ, ಗೋಟೂರು ಶಿವಪ್ಪ, ತಹಸೀಲ್ದಾರ್ ಎಂ. ಸಿದ್ದೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಲಘು ವಾಹನಗಳ ಸಂಚಾರಕ್ಕೆ ಅವಕಾಶ
ವಾಹನ ದಟ್ಟಣೆ ನಿವಾರಿಸುವ ನಿಟ್ಟನಲ್ಲಿ ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಕೈಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿ ಸರ್ವೀಸ್ ರಸ್ತೆಯನ್ನು ಇನ್ನು 7 ದಿನಗಳೊಳಗಾಗಿ ಪೂರ್ಣಗೊಳಿಸಿ ಶಿರಾ ಹಾಗೂ ಮಧುಗಿರಿ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬೈಕ್, ಆಟೋದಂತಹ ಎಲ್ಲಾ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರವಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಲಘು ವಾಹನಗಳ ಸಂಚಾರಕ್ಕೆ ಮುಕ್ತವಾದ ನಂತರ ವ್ಯವಸ್ಥಿತವಾಗಿ ಲಘು ವಾಹನಗಳ ಸುಗಮ ಸಂಚಾರಕ್ಕೆ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಗೆ ಸೂಚಿಸಿದ ಅವರು ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ವಿದ್ಯುದ್ದೀಪ ಅಳವಡಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Get real time updates directly on you device, subscribe now.

Comments are closed.

error: Content is protected !!