ಸಾಂಸ್ಕೃತಿಕ ಚಟುವಟಿಕೆಯಿಂದ ವಿದ್ಯಾರ್ಥಿಗಳ ಉನ್ನತಿ ಸಾಧ್ಯ

ಶ್ರೀಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲಾವೈಭವ

48

Get real time updates directly on you device, subscribe now.


ತುಮಕೂರು: ನಗರದ ಶ್ರೀಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ನಲ್ಲಿ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಾವೈಭವ- 2024ಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಎಸ್ ಎಸ್ ಐಟಿ ಕಾಲೇಜಿನ ಹಸಿರು ಕ್ಯಾಂಪಸ್ ನ ಬಯಲು ಮಂದಿರಲ್ಲಿ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕನ್ನಿಕಾ ಪರಮೇಶ್ವರಿ ಪಿಹೆಚ್ ಡಿ ಪದವೀಧರರಿಗೆ ಅಭಿನಂದಿಸಿದರು.
ನಂತರ ಮಾತಣಾಡಿದ ಅವರು ಕಲೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗೆಲುವಿಗಿಂತ ಭಾಗವಹಿಸುವಿಕೆಗೆ ಹೆಚ್ಚು ಗಮನ ಕೊಡಬೇಕು, ಗೆಲುವು ಸಿಗದವರು ಮತ್ತೆ ಗೆಲುವಿನತ್ತ ಮತ್ತು ಗೆದ್ದವರು ತಮ್ಮ ಉನ್ನತೀಕರಣದ ಕಡೆಗೆ ಗಮನ ಹರಿಸಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಮುಖ್ಯಅತಿಥಿಯಾಗಿದ್ದ ಸರಿಗಮಪ ಖ್ಯಾತಿಯ ಹಿನ್ನೆಲೆ ಗಾಯಕ ವಿದ್ವಾನ್ ಯಶವಂತ್.ಎಂ.ಜಿ. ಮಾತನಾಡಿ, ಶೈಕ್ಷಣಿಕ ಪ್ರಗತಿ ಜೊತೆಗೆ ಸಾಂಸ್ಕೃತಿಕ ಕಲಾ ರುಚಿಯೂ ಇರಬೇಕು, ವಿದ್ಯಾರ್ಥಿಗಳು ವಿವಿಧ ಕಲೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿಕೊಳ್ಳಲು ಕಾಲೇಜಿನಲ್ಲಿ ಸೂಕ್ತ ವೇದಿಕೆಗಳಿರುತ್ತವೆ, ಅದನ್ನು ಸೂಕ್ತವಾಗಿ ಬಳಸಿಕೊಳ್ಳಿ ಎಂದು ಪ್ರೋತ್ಸಾಹಿಸಿದರು.
ಸಾಹೇ ವಿವಿಯ ಉಪ ಕುಲಪತಿಡಾ.ಕೆ.ಬಿ.ಲಿಂಗೇಗೌಡ ಮತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ, ಒಟ್ಟಾಗಿ ಇದ್ದಾಗ ಮಾತ್ರ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಲು ಸಾಧ್ಯ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸಾಧನೆಯ ಕಡೆಗೆ ಮನಸ್ಸು ಮಾಡಬೇಕು, ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವಾಗಿರುತ್ತದೆಯೋ ಅದೇ ರೀತಿ ಸಾಂಸ್ಕೃತಿಯ ಕಾರ್ಯಕ್ರಮ ಕೂಡ ಬಹು ಮುಖ್ಯವಾಗಿರುತ್ತವೆ ಎಂದರು.

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ಕಲೋತ್ಸವ 2024ರ ಅಧ್ಯಕ್ಷರಾದ ಡಾ.ಎಸ್.ರೇಣುಕಾಲತಾ ಕಲೋತ್ಸವ ವರದಿ ಮಂಡಿಸಿ, ಕಲೋತ್ಸವದಲ್ಲಿ 36 ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಹೇ ರಿಜಿಸ್ಟ್ರಾರ್ ಡಾ.ಎಂ.ಝಡ್.ಕುರಿಯನ್, ಸಾಹೇ ಕುಲಾಧಿಪತಿಗಳ ಸಲಹೆಗಾರ ಡಾ.ವಿವೇಕ ವೀರಯ್ಯ, ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್ ಸೇರಿದಂತೆ ಎಲ್ಲಾ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!