ತುಮಕೂರು:ಮಾಜಿ ಸಚಿವ ಸೊಗಡು ಶಿವಣ್ಣ ಅವರು ಜಿಲ್ಲೆಗೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಇವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನಿಡಬೇಕು ಎಂದು ಬಿಜೆಪಿಯ ವಿವಿಧ ಮುಖಂಡರು, ಹಲವು ಸಮಾಜದ ಪ್ರಮುಖರು ಜಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬಾರದಿದ್ದ ಕಾಲದಿಂದಲ್ಲೂ ತುಮಕೂರಿನಲ್ಲಿ ಬಿಜೆಪಿಯಿಂದ ಶಾಸಕರಾಗಿ ನಾಲ್ಕು ಬಾರಿ ವಿಧಾನ ಸಭೆಗೆ ಆಯ್ಕೆಯಾಗಿದ್ದ ಸೊಗಡು ಶಿವಣ್ಣನವರು,ಎರಡು ಬಾರಿ ಸಚಿವರಾಗಿದ್ದರು. ಜನಪರ ಹೋರಾಟಗಳ ಮೂಲಕ ಜನಾನುರಾಗಿ ನಾಯಕರಾಗಿ ಎಲ್ಲಾ ವರ್ಗದ ಜನರ ವಿಶ್ವಾಸದೊಂದಿಗೆ ಇಂದಿಗೂ ಜನಪರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು ಎಂದು ಕೋರಿದರು.
ವೀರಶೈವ ಸಮಾಜ ಸೇವಾ ಸಮಿತಿ ಉಪಾಧ್ಯಕ್ಷ ಎಸ್.ಜಿ.ಚಂದ್ರಮೌಳಿ ಮಾತನಾಡಿ, ಸೊಗಡು ಶಿವಣ್ಣನವರು ಶಾಸಕರಾಗಿದ್ದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಜಾತಿ ಭೇಧ ಮಾಡದೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಜನಸಾಮಾನ್ಯರ ನಾಯಕರಾಗಿ ಹೆಸರಾಗಿದ್ದರೆ, ಇವರಿಗೆ ಬಿಜೆಪಿ ಸೂಕ್ತವಾದ ಸ್ಥಾನಮಾನ ನೀಡಿ ಅವರ ಕೊಡುಗೆ, ಹಿರಿತನವನ್ನು ಗೌರವಿಸಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಸಮಾಜ ಮುಖಂಡ ಹೆಬ್ಬಾಕ ಮಲ್ಲಿಕಾರ್ಜುನ್,ಎಪಿಎಂಸಿ ಮಾಜಿ ಅಧ್ಯಕ್ಷ ಪಂಚಾಕ್ಷರಯ್ಯ ಕನ್ನಡ ಸೇನೆಯ ಜಿಲ್ಲಾ ಅಧ್ಯಕ್ಷ ಧನಿಯಾಕುಮಾರ್ ಸ್ನೇಹಸಂಗಮ ಸಹಕಾರ ಸಂಘದ ಅಧ್ಯಕ್ಷ ಬಾವಿಕಟ್ಟೆ ಮಂಜುನಾಥ್, ಮುಖಂಡರಾದ ನಂಜುಂಡಪ್ಪ, ಪುರವರ ಮೂರ್ತಿ, ಡೆಲ್ಟಾ ರವಿ, ಪ್ರಭಾಕರ್, ಯಶಸ್, ಏಕಾಂತ್, ಮಹದೇವಯ್ಯ, ರವಿಕುಮಾರ್, ಮಂಜುನಾಥ್ ಮೊದಲಾದವರು ಹಾಜರಿದ್ದರು.
Comments are closed.