ತುಮಕೂರು: ಶಿಕ್ಷಣ ಕ್ಷೇತ್ರವು ಅತ್ಯಂತ ಪವಿತ್ರ ಕ್ಷೇತ್ರವಾಗಿದ್ದು, ಶಿಕ್ಷಕ ವೃತ್ತಿ ಅಷ್ಟೇ ಪ್ರಾಮುಖ್ಯತೆ ಹೊಂದಿರುವ ಪವಿತ್ರ ವೃತ್ತಿಯಾಗಿದೆ, ಇಂತಹ ರಾಷ್ಟ್ರ ಸೇವಾ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವ ಶಿಕ್ಷಕರಿಗೆ ಅನ್ಯಾಯ ಎಸಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ್ಥ ಹೋರಾಟ ಮಾಡಬಲ್ಲ ಸಾಮರ್ಥ್ಯ ಇರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಶಿಕ್ಷಕರಿಗೆ ಕರೆ ನೀಡಿದರು.
ತುಮಕೂರು ನಗರದ ವಿವಿಧ ಶಾಲಾಕಾಲೇಜುಗಳಲ್ಲಿ ಶಿಕ್ಷಕರ ಮತಯಾಚನೆ ಮಾಡಿದ ನಂತರ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಪ್ರಾಮಾಣಿಕವಾಗಿ ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿ ವಿಧಾನ ಪರಿಷತ್ತಿಗೆ ಅನೇಕ ಹಿರಿಯರು ಆಯ್ಕೆಯಾಗಿ ಮೇಲ್ಮನೆಯ ಘನತೆ ಹೆಚ್ಚಿಸಿದ್ದಾರೆ, ಆದರೆ ಇಂದು ಶಿಕ್ಷಣ ಮತ್ತು ಶಿಕ್ಷಕರ ಸಮಸ್ಯೆಗಳ ಅರಿವಿಲ್ಲದೆ ಕೇವಲ ಅಧಿಕಾರಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಹಣಬಲ, ಅಧಿಕಾರ ಬಲಗಳಿಂದ ಗೆಲ್ಲಲು ಪ್ರಯತ್ನಿಸುತ್ತಿರುವ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿ ಕಳೆದ 18 ವರ್ಷಗಳಿಂದಲೂ ಶಿಕ್ಷಕರಿಗೆ ಸದಾ ಸ್ಪಂದಿಸುತ್ತಿರುವ ಮೈತ್ರಿ ಅಭ್ಯರ್ಥಿ ನಾರಾಯಣ ಸ್ವಾಮಿ ಅವರನ್ನು ಗೆಲ್ಲಿಸಿ ಮೇಲ್ಮನೆಯ ಘನತೆ ಎತ್ತಿ ಹಿಡಿಯಬೇಕೆಂದು ಶಿಕ್ಷಕರಿಗೆ ತಿಳಿಸಿದರು.
ತುಮಕೂರು ನಗರ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್, ಎಲ್.ಸಿ.ನಾಗರಾಜು, ಕೊಪ್ಪಲ್ ನಾಗರಾಜ್ ಇತರರು ಇದ್ದರು.
Comments are closed.