ಪಾವಗಡ: ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಸತತವಾಗಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದು, ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದ ಮಟ್ಕಾ ಕಿಂಗ್ ಪಿನ್ ಅಶ್ವತ್ಥನಾರಾಯಣ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.
ಪಾವಗಡ ತಾಲೂಕಿನಲ್ಲಿ ಅತೀ ಹೆಚ್ಚು ಮಟ್ಕಾ ದಂಧೆ ನಡೆಯುತಿತ್ತು, ಪೊಲೀಸರು ದಂಧೆ ನಿಯಂತ್ರಿಸಲು ಸಾಕಷ್ಟು ಶ್ರಮಿಸುತ್ತಿದ್ದರು, ಇದಕ್ಕೆ ಸಂಬಂಧಿಸಿದಂತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಕೃಷ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕರು ಇವರು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆಗೆ ಸಲ್ಲಿಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಅಕ್ರಮ ಚಟುವಟಿಕೆಗಳ ತಡೆ ಅಧಿನಿಯಮ 1985ರ ಅಡಿಯಲ್ಲಿ ಅಶ್ವಥ್ ನಾರಾಯಣ ನನ್ನು ಜಿಲ್ಲಾ ಕಾರಾಗೃಹದಲ್ಲಿ ಸ್ಥಾನಬದ್ಧತೆ ಬಂಧನದಲ್ಲಿ ಇಡಲು ಆದೇಶಿಸಿದ್ದರು.
ಅದರಂತೆ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿ ಇಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಮಟ್ಕಾ ಕಿಂಗ್ ಪಿನ್ ಅಶ್ವತ್ ನಾರಾಯಣ್ ಬಂಧನಕ್ಕೆ ಶ್ರಮಿಸಿದ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಪ್ರಶಂಶಿಸಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.