ತುಮಕೂರು: ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯುವುದರಿಂದ ಮತ ಎಣಿಕೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭಗೊಳ್ಳುವುದರಿಂದ ಮತ ಎಣಿಕೆ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ನಿಗಧಿತ ಸಮಯಕ್ಕೆ ಮತ ಎಣಿಕಾ ಕೇಂದ್ರದಲ್ಲಿ ಹಾಜರಾಗುವಂತೆ ತಿಳಿಸಿದರು.
ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡ ನಂತರದಲ್ಲಿ ಮತ ಎಣಿಕೆ ಏಜೆಂಟ್ ಗಳು ಶಿಸ್ತುಬದ್ದವಾಗಿ ನಡೆದುಕೊಳ್ಳುವಂತೆ ಎಚ್ಚರ ವಹಿಸಬೇಕು, ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವ ವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತೆ ಆಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಶಿಲ್ದಾರ್ ರೇಷ್ಮ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Comments are closed.