ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

21

Get real time updates directly on you device, subscribe now.


ಗುಬ್ಬಿ: ಪರಿಸರ ಸಂರಕ್ಷಣೆ ಕೇವಲ ಯಾರೊಬ್ಬರ ಜವಾಬ್ದಾರಿ ಅಲ್ಲ, ಬದಲಾಗಿ ಎಲ್ಲರೂ ಸಾಮೂಹಿಕವಾಗಿ ಕೈಜೋಡಿಸಿದಲ್ಲಿ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನುತಾ ತಿಳಿಸಿದರು.
ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ಸಂರಕ್ಷಣೆ ವಿಚಾರದಲ್ಲಿ ಕಾನೂನಿನ ಜೊತೆ ಎಲ್ಲರಲ್ಲಿ ಅರಿವನ್ನು ಮೂಡಿಸಬೇಕಿದೆ ಎಂದು ಹೇಳಿದರು.

ಈ ಭೂಮಿಯ ಮೇಲೆ ವಾಸಿಸುತ್ತಿರುವ ಎಲ್ಲಾ ಜೀವಿಗಳಿಗೂ ಅನುಕೂಲ ಮಾಡಿಕೊಟ್ಟಿರುವ ಈ ಪರಿಸರವನ್ನು ನಾವು ಗೌರವಿಸಬೇಕಿದೆ, ಆಧುನಿಕತೆ ಹೆಚ್ಚಾದಂತೆ ಮರ ಗಿಡಗಳು ಕಣ್ಮರೆಯಾಗುತ್ತಿರುವುದು ದುರಾದೃಷ್ಟಕರ, ಎಲ್ಲರೂ ಎಚ್ಚೆತ್ತುಕೊಂಡು ಪ್ರಕೃತಿ ಉಳಿಸುವತ್ತ ಗಮನ ಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತ ಎದುರಿಸಬೇಕಾಗುತ್ತದೆ ಎಂದರು.

ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಮ್ಮ ಪೂರ್ವಜರು ಉತ್ತಮ ಬೂನಾದಿ ಹಾಕಿ ಕೊಟ್ಟಿದ್ದಾರೆ, ಅವುಗಳನ್ನು ರೂಡಿಸಿಕೊಂಡು ಪರಿಸರ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಿರೋಣ ಎಂದು ಹೇಳಿದರು.
ಪ್ರಾಂಶುಪಾಲ ಡಾ.ಪ್ರಸನ್ನಕುಮಾರ್ ಮಾತನಾಡಿ ಕಾಲೇಜಿನ ಆವರಣದಲಷ್ಟೆ ಅಲ್ಲದೆ ಎನ್ ಎಸ್ ಎಸ್ ಘಟಕದ ವತಿಯಿಂದ ಗ್ರಾಮೀಣ ಭಾಗಗಳಲ್ಲಿಯೂ ಗಿಡ ನೆಟ್ಟು ಸಾರ್ವಜನಿಕರನ್ನು ಪ್ರೇರೇಪಿಸುತ್ತಿದ್ದೇವೆ, ಇನ್ನೂ ಹೆಚ್ಚಿನ ಗಿಡಗಳನ್ನು ನೆಟ್ಟು ಘೋಷಿಸುವ ಜವಾಬ್ದಾರಿಯನ್ನು ಮಕ್ಕಳ ಜೊತೆ ನಿರ್ವಹಿಸುತ್ತೇವೆ ಎಂದು ಹೇಳಿದರು.

ವಲಯ ಅರಣ್ಯಾಧಿಕಾರಿ ಸತೀಶ್ ಚಂದ್ರ ಮಾತನಾಡಿ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಅನೇಕ ಯೋಜನೆ ರೂಪಿಸಲಾಗುತ್ತಿದೆ, ಅರಣ್ಯ ಇಲಾಖೆ ವ್ಯಾಪ್ತಿಯ ಸಸ್ಯ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಸಸಿ ಬೆಳೆಸಿದ್ದು, ರೈತರಿಗೆ ಹಾಗೂ ಆಸಕ್ತರಿಗೆ ನೀಡಲಾಗುವುದು, ಸಾರ್ವಜನಿಕರು ಇಲಾಖೆಯ ಜೊತೆ ಸಹಕರಿಸಿದಲ್ಲಿ ಹೆಚ್ಚು ಮರ ಗಿಡ ಬೆಳೆಸಲು ಸಾಧ್ಯವಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳನ್ನು ಪ್ರೇರೇಪಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಕೀಲರ ಸಂಘದ ಕಾರ್ಯದರ್ಶಿ ಸುರೇಶ್, ಖಜಾಂಚಿ ಶಿವಾನಂದ್, ಕಾನೂನು ಸೇವಾ ಪ್ರಾಧಿಕಾರದ ಕೃಷ್ಣಮೂರ್ತಿ, ಕಾಲೇಜಿನ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!