ಕೋಡಿಹಳ್ಳಿ ಬಂಧನಕ್ಕೆ ಡಿಎಸ್4 ಖಂಡನೆ

540

Get real time updates directly on you device, subscribe now.

ಶಿರಾ: ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕುವ ಉದ್ದೇಶದೊಂದಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಡಿಎಸ್4 ತಾಲ್ಲೂಕು ಅಧ್ಯಕ್ಷ ಟೈರ್ ರಂಗನಾಥ್ ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರ ತನ್ನ ಉದ್ಧಟತನವನ್ನು ಬಿಟ್ಟು ಮಾತುಕತೆ ನಡೆಸಲು ಮುಂದಾಗಬೇಕು. ಸಾರಿಗೆ ನೌಕರರು ಮಾಡುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಹಲವಾರು ವರ್ಷಗಳಿಂದ ಅವರ ವೇತನ ಹೆಚ್ಚಳದ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ ಮತ್ತು ನೌಕರರ ಪ್ರತಿಭಟನೆ ರಾಜ್ಯ ಸರ್ಕಾರದಲ್ಲಿ ಯಾರು ಜವಾಬ್ದಾರಿಯುತವಾಗಿ ವರ್ತಿಸುತ್ತಿಲ್ಲ. ಸಾವಿರ ಕೋಟಿ ರೂ ಹೊರೆಯ ಬಗ್ಗೆ ಯೋಚಿಸುತ್ತಿರುವ ಸರ್ಕಾರ, ನೌಕರರ ಸಂಕಷ್ಟಕ್ಕೆ ಮರುಗುತ್ತಿಲ್ಲ. ಮಠಮಾನ್ಯಗಳಿಗೆ ಕೋಟಿಗಟ್ಟಲೆ ಹಣ ಕೊಡುತ್ತಿರುವ ಸರ್ಕಾರ ನೌಕರರ ವಿಚಾರವಾಗಿ ಹಠಮಾರಿತನವನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡುವುದು ಅಪರಾಧವಲ್ಲ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸುವುದು ಸಂವಿಧಾನಬದ್ಧವಾದ ಸರ್ಕಾರ ಕರ್ತವ್ಯವಾಗಿರುತ್ತದೆ. ಸಾರಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಸಾರಿಗೆ ನೌಕರರ ಮಾಡುತ್ತೇವೆ ಎಂದು ಬೆದರಿಕೆ ಹಾಕುವ ಮೂಲಕ, ನೌಕರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಚಳುವಳಿಯ ನಾಯಕರನ್ನು ಬಂಧಿಸುವ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ.
ಸರ್ಕಾರ ತಕ್ಷಣ ಸಾರಿಗೆ ನೌಕರರನ್ನು ಕರೆದು ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ಹಿರಿಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!