ತುಮಕೂರು: ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.
ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಆವರಿಸಿ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯರೆಲ್ಲಾ ಆತಂಕದಿಂದ ಹೊರಕ್ಕೆ ಓಡಿ ಬಂದಿದ್ದಾರೆ.
ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳ ಭೇಟಿ ಬೆಂಕಿ ನಂದಿಸಿದ್ದಾರೆ,
ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ, ಈ ಹಾಸ್ಟೆಲ್ ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು.
ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ದಳ ಹೆಚ್ಚಿನ ತೊಂದರೆಯಾಗುವುದನ್ನು ತಪ್ಪಿಸಿದ್ದಾರೆ, ಹೆಚ್ಚು ವಿದ್ಯಾರ್ಥಿನಿಯರು ಇರುವ ಈ ಹಾಸ್ಟೆಲ್ ನಲ್ಲಿ ಇಂತಹ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಾಜಿ ಸಚಿವ ಸೊಗಡು ಶಿವಣ್ಣ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದ್ದಾರೆ. ಮುಂದೆ ಇಂತಹ ಅವಘಡ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸದ ಜಿಲ್ಲಾಧಿಕಾರಿ, ವಿದ್ಯಾರ್ಥಿನಿಯರು ಕೂಡ ಜಾಗ್ರತೆಯಿಂದ ಇರಬೇಕು ಎಂದು ತಿಳಿಸಿದರು.
Comments are closed.