ಕೊರಟಗೆರೆ: 13 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣವಾದ ಅಪರಾಧಿ ಶ್ರೀನಿವಾಸ್ಗೆ (40) ಪೋಕ್ಸೋ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 1.05 ಲಕ್ಷ ದಂಡ ವಿಧಿಸಿದೆ.
2022ರ ಮೇ ತಿಂಗಳಿನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿದ ಶ್ರೀನಿವಾಸ್ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ, ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದ, ನಂತರ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು, ತಾಲೂಕಿನ ಕೋಳಾಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ತನಿಖಾಧಿಖಾರಿ ಕೆ.ಸುರೇಶ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು, ನ್ಯಾಯಾಲಯದಲ್ಲಿ ವಿಚಾರಣೆ ಸಮಯದಲ್ಲಿ ಕಲಂ 6 ಪೋಕ್ಸೊ ಆಕ್ಟ್ ಮತ್ತು ಐಪಿಸಿ ಕಲಂ 506ರ ಅಡಿಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ 10 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ, ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.
ಅತ್ಯಾಚಾರ ಅಪರಾಧಿಗೆ ಶಿಕ್ಷೆ
Get real time updates directly on you device, subscribe now.
Next Post
Comments are closed.