ತುಮಕೂರಿನಲ್ಲೂ ಹೆಚ್ ಡಿಕೆಗೆ ಅದ್ದೂರಿ ಸ್ವಾಗತ

27

Get real time updates directly on you device, subscribe now.


ತುಮಕೂರು: ನಗರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊಬ್ಬರಿ ಹಾರ ಹಾಕಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಬರ ಮಾಡಿಕೊಂಡರು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರು ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ ಸ್ವಾಗತಿಸುವ ಮೂಲಕ ಕಲ್ಪತರು ನಾಡಿಗೆ ಸ್ವಾಗತ ಕೋರಿದರು.
ಕಾರ್ಯಕರ್ತರ ಅದ್ದೂರಿ ಸ್ವಾಗತ ಸ್ವೀಕರಿಸಿದ ಕುಮಾರಸ್ವಾಮಿ ಅವರು ಸಿದ್ಧಗಂಗಾ ಮಠಕ್ಕೆ ತೆರಳಿ ಲಿಂ.ಡಾ.ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು, ಬಳಿಕ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.

Get real time updates directly on you device, subscribe now.

Comments are closed.

error: Content is protected !!