ತುಮಕೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಸರ್ಕಾರದ ಕ್ರಮ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಜೂ. 20 ರಂದು ರಾಜ್ಯಾದ್ಯಂತ ರಸ್ತೆ ರೋಖೋ ಚಳವಳಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದೇವೆ, ರಾಜ್ಯದಲ್ಲಿ ಭಂಡ ಸರ್ಕಾರ ಅಧಿಕಾರದಲ್ಲಿದೆ, ಹಾಗಾಗಿ ಹೋರಾಟ ಮುಂದುವರೆಸುವ ಅನಿವಾರ್ಯತೆ ಇರುವುದರಿಂದ ಗುರುವಾರ ರಸ್ತೆ ರೋಖೋ ಚಳವಳಿಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದೇವೆ ಎಂದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊದಿಗೆ ಮಾತನಾಡಿ, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ದೂರುತ್ತಾ ತಮ್ಮ ಸರ್ಕಾರದ ಹುಳುಕನ್ನು ಮುಚ್ಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಸುರೇಶ್ ಗೌಡ, ಜ್ಯೋತಿಗಣೇಶ್, ರಾಮಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಎಸ್. ಶಿವಪ್ರಸಾದ್, ಡಾ.ಪರಮೇಶ್, ಸ್ಫೂರ್ತಿ ಚಿದಾನಂದ್, ಬ್ಯಾಟರಂಗೇಗೌಡ, ಅಂಬಿಕಾ ಹುಲಿನಾಯ್ಕರ್, ದಿಲೀಪ್ ಕುಮಾರ್, ಟಿ.ಆರ್. ಸದಾಶಿವಯ್ಯ. ರುದ್ರೇಶ್, ಗ್ಯಾಸ್ ಚಂದ್ರಶೇಖರಬಾಬು ಇತರರು ಇದ್ದರು.
Comments are closed.