ಗುಬ್ಬಿ: ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣ ಮಾಡುವುದಕ್ಕೆ ಯೋಜನೆ ರೂಪಿಲಾಗಿದ್ದು ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿಯ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ಬಸ್ ನಿಲ್ದಾಣದಲ್ಲಿ ಮಾತನಾಡಿದವ ಅವರು ಎಲ್ಲಾ ರೀತಿಯ ಮೂಲಭೂತ ಸೌಲಭ್ಯ ಒದಗಿಸಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದ್ದು ಗುಬ್ಬಿ ತಾಲೂಕಿಗೆ ಬಸ್ ಡಿಪೋ ಕೂಡ ಇನ್ನು ಕೆಲವೇ ದಿನಗಳಲ್ಲಿ ಮಾಡಲಾಗುತ್ತದೆ, ಶಾಲಾ ಕಾಲೇಜು, ವಿದ್ಯಾರ್ಥಿಗಳಿಗೆ ಬೆಳಗ್ಗೆ ಸಾಕಷ್ಟು ಬಸ್ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ಅದರ ಬಗ್ಗೆಯೂ ಅಧಿಕಾರಿಗಳ ಜೊತೆಯಲ್ಲಿ ಮಾತನಾಡಿ ಯಾವುದೇ ಸಮಸ್ಯೆ ಆಗದಂತೆ ಬಸ್ ವ್ಯವಸ್ಥೆ ಮಾಡಲಾಗುತ್ತದೆ, ಈಗ ಒಂದು ಸಾವಿರಕ್ಕೂ ಹೆಚ್ಚು ಬಸ್ ಗಳನ್ನು ಹೊಸದಾಗಿ ಖರೀದಿ ಮಾಡಿ ರಾಜ್ಯಕ್ಕೆ ಬಿಡಲಾಗಿದೆ, ಆದರೂ ಸಹ ಇನ್ನೂ ಬಸ್ಸಿನ ಕೊರತೆ ಕಾಡುತ್ತಿದ್ದು ಮುಂದಿನ ದಿನದಲ್ಲಿ ಹೆಚ್ಚಿನ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಯ ಜಿಲ್ಲಾ ಅಧಿಕಾರಿ ಚಂದ್ರ ಶೇಖರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಕುಮಾರ್, ಮಹಮದ್ ಸಾಧಿಕ್, ಶೌಕತ್ ಅಲಿ, ಮೋಹನ್, ರಂಗಸ್ವಾಮಿ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ವೆಂಕಟೇಶ್.ಕೆ.ಆರ್. ಸೇರಿದಂತೆ ಹಲವು ಮುಖಂಡರು, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುಳಾ ಇನ್ನಿತರರು ಹಾಜರಿದ್ದರು.
Comments are closed.