ತುಮಕೂರು: ಭಾರತ ದೇಶದ ಪರಂಪರೆ, ಸಂಸ್ಕೃತಿಯು ತುಂಬಾ ಪ್ರಾಚೀನವಾಗಿದ್ದು, ಜಗತ್ತಿಗೆ ಆದರ್ಶವಾಗಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ಜಗತ್ತಿಗೆ ಪರಿಚಯಿಸಲ್ಪಟ್ಟು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೂಲಕ ವಿಶ್ವದ 187ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲ್ಪಡುತ್ತಿದೆ ಎಂದು ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ 10ನೇ ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವಸಂಸ್ಥೆಯಲ್ಲಿ ನಡೆದ 2014ರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವ ವಿವರಿಸಿ, ಜಗತ್ತಿನ ಆರೋಗ್ಯಕ್ಕಾಗಿ ಯೋಗದ ಅನಿವಾರ್ಯತೆ ಪ್ರತಿಪಾದಿಸಿದರು, ಪ್ರಧಾನ ಮಂತ್ರಿಗಳ ಪ್ರಯತ್ನದಿಂದ ವಿಶ್ವಸಂಸ್ಥೆಯು 2014ರ ವರ್ಷದಿಂದ ಪ್ರತಿ ವರ್ಷ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದ್ದು, ಭಾರತಕ್ಕೆ ಸೀಮಿತವಾಗಿದ್ದ ಯೋಗವು ಪ್ರಧಾನ ಮಂತ್ರಿಯವರ ದೂರದೃಷ್ಟಿ ಚಿಂತನೆಯಿಂದ ಜಗತ್ತಿನ ಎಲ್ಲಾ ದೇಶಗಳಲ್ಲಿ ಜನಪ್ರಿಯವಾಗಿದೆ ಎಂದು ತಿಳಿಸಿದರು.
ಸಚಿವರೊಂದಿಗೆ ಯೋಗ ಮಾಡಿದ ಅಧಿಕಾರಿಗಳು
ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪ್ರಭಾಕರ್.ವಿ.ಎಂ, ಜಂಟಿ ಕೃಷಿ ನಿರ್ದೇಶಕ ರಮೇಶ್, ಸೇರಿದಂತೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಗಾಭ್ಯಾಸದಲ್ಲಿ ಸಕ್ರೀಯವಾಗಿ ಭಾಗಿಯಾದರು.
Comments are closed.