ಕೋವಿಡ್ ಮುಕ್ತಗೊಳಿಸಲು ಲಸಿಕೆ ಹಾಕಿಸಿಕೊಳ್ಳಿ: ಮೇಯರ್

145

Get real time updates directly on you device, subscribe now.

ತುಮಕೂರು: ನಗರವನ್ನು ಕೊರೊನಾ ರೋಗ ಮುಕ್ತವಾಗಿಸುವ ನಿಟ್ಟಿನಲ್ಲಿ 2-3 ವಾರ್ಡ್ ಸೇರಿದಂತೆ ಒಂದು ಕಡೆ ಲಸಿಕೆ ಹಾಕುವ ಕೇಂದ್ರ ತೆರೆಯುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರೂ ಅಲ್ಲಿಗೆ ಆಗಮಿಸಿ ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದುಕೊಳ್ಳುವಂತೆ ತುಮಕೂರು ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ ಮನವಿ ಮಾಡಿದ್ದಾರೆ.
ನಗರದ ಟೌನ್ಹಾಲ್ ಸಮೀಪದಲ್ಲಿರುವ ಟೌನ್ಕ್ಲಬ್ನಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕ್ಲಬ್ನ ಸದಸ್ಯರಿಗಾಗಿ ಏರ್ಪಡಿಸಿದ್ದ ಉಚಿತ ಕೋವಿಡ್ ಖಾಯಿಲೆ ವಿರುದ್ಧದ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೊರೊನಾ ಎರಡನೇ ಅಲೆಯಿಂದ ಬಹಳ ಜನರು ಬಹುಬೇಗ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ಬಚಾವ್ ಆಗಲು ಇರುವ ಏಕೈಕ ಮಾರ್ಗವೆಂದರೆ ವ್ಯಾಕ್ಸಿನೇಷನ್ ಪಡೆಯುವುದಾಗಿದೆ, ಹಾಗಾಗಿ ನಗರಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಗರದ 2- 3 ವಾರ್ಡ್ಗಳನ್ನು ಒಟ್ಟಿಗೆ ಸೇರಿಸಿ ಒಂದೆಡೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ, ಇದರ ಪ್ರಯೋಜನವನ್ನು ನಾಗರಿಕರು ಪಡೆದುಕೊಂಡು, ನಗರವನ್ನು ಕೋವಿಡ್ ಮುಕ್ತಗೊಳಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಿದರು.
ನಗರಪಾಲಿಕೆ ಆಯುಕ್ತರಾದ ರೇಣುಕಾ ಮಾತನಾಡಿ, ಕೋವಿಡ್- 19 ಅಬ್ಬರ ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶೇ.25 ರಷ್ಟು ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿದೆ, ಸರಕಾರದ ನಿರ್ದೇಶಕನದಂತೆ 45 ವರ್ಷ ಮೇಲ್ಮಟ್ಟ ಎಲ್ಲರಿಗು ಲಸಿಕೆ ಹಾಕುವ ಕಾರ್ಯ ನಡೆಯುತ್ತಿದೆ, ಸಂಘ ಸಂಸ್ಥೆಗಳು, ವಾರ್ಡ್ ಕಾರ್ಪೊರೇಟರ್ಗಳು ಸಹಕಾರ ನೀಡುತ್ತಿದ್ದಾರೆ, 15ನೇ ವಾರ್ಡ್ನ ಸದಸ್ಯೆ ಗಿರಿಜಾ ಧನಿಯಕುಮಾರ್ ಅವರ ನೇತೃತ್ವದಲ್ಲಿ ಟೌನ್ಕ್ಲಬ್ನಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಹಾಗೆಯೇ ವಾರ್ಡ್ಗಳಲ್ಲಿಯೂ ಲಸಿಕೆ ಹಾಕುವ ಕಾರ್ಯಕ್ರಮ ಚಾಲ್ತಿಯಲ್ಲಿದೆ, ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಟೌನ್ಕ್ಲಬ್ ಕಾರ್ಯದರ್ಶಿ ಸುಜ್ಞಾನ್ ಹಿರೇಮಠ್ ಮಾತನಾಡಿ, ವಾರ್ಡ್ನ ಕಾರ್ಪೋರೇಟರ್, ನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಹಕಾರದೊಂದಿಗೆ ಕ್ಲಬ್ನ 45 ವರ್ಷ ವಯಸ್ಸು ಮೀರಿದ ಸದಸ್ಯರಿಗೆ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ, ಸದಸ್ಯರು ಇದರ ಪ್ರಯೋಜನ ಪಡೆದುಕೊಂಡು ರೋಗಮುಕ್ತರಾಗಬೇಕೆಂದು ಕರೆ ನೀಡಿದರು.
ಈ ವೇಳೆ ಕ್ಲಬ್ನ ಉಪಾಧ್ಯಕ್ಷ ಅಮರನಾಥ್, ಕಾರ್ಯಕಾರಿ ಮಂಡಳಿ ಸದಸ್ಯರಾದ ಕುಮಾರ್.ಟಿ.ಕೆ., ಭಾರತೀಶ್, ಸುನಿಲ್, ಲೋಕೇಶ್ ಹೆಚ್.ಆರ್, ಪ್ರಭು, ಮಹೇಶ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!