ಕೆಪಿಟಿಸಿಎಲ್ ಉಪ ಸ್ಥಾವರಗಳಿಗೆ ಡೀಸಿ ಭೇಟಿ

42

Get real time updates directly on you device, subscribe now.


ತುಮಕೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಕೊರಟಗೆರೆ ತಾಲ್ಲೂಕು ಸಂಕೇನಹಳ್ಳಿ ಹಾಗೂ ಬೈರೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ 66/11 ಕೆವಿ ಉಪ ಸ್ಥಾವರಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜುಲೈ 1 ರಂದು ಸಂಕೇನಹಳ್ಳಿ ಹಾಗೂ ಬೈರೇನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯುತ್ ಉಪ ಸ್ಥಾವರಗಳ ಉದ್ಘಾಟನೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.

ಉದ್ಘಾಟನೆಗೆ ಸಿದ್ಧವಿರುವ ಸಂಕೇನಹಳ್ಳಿಯ 2*8 ಎಂವಿಎ, ಉಪಸ್ಥಾವರ ಮತ್ತು 9.625 ಕಿ.ಮೀ. ಉದ್ದದ ಹಾಗೂ ಬೈರೇನಹಳ್ಳಿಯ 2*8 ಎಂವಿಎ, ಉಪಸ್ಥಾವರ ಮತ್ತು 4.468 ಕಿ.ಮೀ. ಉದ್ದದ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾರ್ಯ ನಿರ್ವಾಹಕ ಇಂಜಿನಿಯರ್ ಸೈಯದ್ ಮೆಹಮೂದ್ ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಉದ್ಘಾಟನಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶಿಸಿದರು, ಕೊರಟಗೆರೆ ತಹಶೀಲ್ದಾರ್ ಕೆ.ಮಂಜುನಾಥ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!