ಆಸ್ಪತ್ರೆಗೆ ಬಾರದ ವೈದ್ಯರು- ಗ್ರಾಮಸ್ಥರಿಂದ ಪ್ರತಿಭಟನೆ

35

Get real time updates directly on you device, subscribe now.


ಕುಣಿಗಲ್: ತಾಲೂಕಿನ ಚೌಡನಕುಪ್ಪೆ ಆರೋಗ್ಯ ಕೇಂದ್ರಕ್ಕೆ ಸಕಾಲದಲ್ಲಿ ವೈದ್ಯರು ಆಗಮಿಸದ ಕಾರಣ ರೋಗಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಾಲೂಕು ಆರೋಗ್ಯ ಇಲಾಖೆಯ ಕಾರ್ಯ ವೈಖರಿಯನ್ನು ತೀವ್ರವಾಗಿ ಖಂಡಿಸಿದರು. ಕುಣಿಗಲ್ ತಾಲೂಕು ಹುಲಿಯೂರು ದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು, ಡಿ ಗ್ರೂಪ್ ನೌಕರರಿನಿದ್ದು, ಕರ್ತವ್ಯಕ್ಕೆ ನಿಯೋಜಿಸಿರುವ ವೈದ್ಯರು ಸಕಾಲಕ್ಕೆ ಆಗಮಿಸಿದ ಕಾರಣ ಕಳೆದ ತಿಂಗಳು ಸಕಾಲಕ್ಕೆ ಚಿಕಿತ್ಸೆ ಸಿಗದೇ ಯುವಕನೊಬ್ಬ ಮೃತಪಟ್ಟಿದ್ದ.
ಸೋಮವಾರವಾದ ಕಾರಣ ಸಹಜವಾಗಿ ಚೌಡನಕುಪ್ಪೆ ಸುತ್ತಮುತ್ತಲ ಗ್ರಾಮದ ರೋಗಿಗಳು ಚಿಕಿತ್ಸೆಗಾಗಿ ಬೆಳಗಿನಿಂದಲೆ ಪ್ರಾಥಮಿಕ ಆರೋಗ್ಯಕೇಂದ್ರದ ಬಳಿ ಕಾದು ಕುಳಿತಿದ್ದರು, ಡಿ ಗ್ರೂಪ್ ನೌಕರ ಕೇಂದ್ರದ ಬಾಗಿಲು ತೆರೆದರೂ ಬೆ.11.30 ಗಂಟೆಯಾದರೂ ವೈದ್ಯರು ಆಗಮಿಸದ ಕಾರಣ ತಾಲೂಕು ಆರೋಗ್ಯಾಧಿಕಾರಿಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮದ ಮುಖಂಡರಾದ ಜವರಯ್ಯ, ಚೌಡಪ್ಪ, ರವಿ ಇತರರು ತಾಲೂಕು ಆರೋಗ್ಯ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕೂಡಲೇ ಕ್ರಮ ಕೈಗೊಳ್ಳದೆ ಇದ್ದಲ್ಲಿ ಕುಣಿಗಲ್ ಪಟ್ಟಣಕ್ಕೆ ಆಗಮಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ, ತಾಲೂಕು ಆರೋಗ್ಯ ಅಧಿಕಾರಿ ತಾತ್ಕಾಲಿಕ ವ್ಯವಸ್ಥೆ ಮಾಡಿದರು, ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥ ರವಿ, ಸಮರ್ಪಕವಾಗಿ ವೈದ್ಯರು ಬರುವುದಿಲ್ಲ, ಬೇರೆ ಯಾವುದೇ ಸಿಬ್ಬಂದಿ ನೇಮಕ ಮಾಡಿಲ್ಲ, ಚೌಡನಕುಪ್ಪೆ ಗ್ರಾಮದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚುಗ್ರಾಮಗಳು ಬರುತ್ತಿದ್ದು, ಚಿಕಿತ್ಸೆಗಾಗಿ ರೋಗಿಗಳು ಪರದಾಡುವ ಸ್ಥಿತಿಯಿದೆ, ಕನಿಷ್ಠ ದಾದಿಯರನ್ನಾದರೂ ನೇಮಿಸಿದಲ್ಲಿ ಅನುಕೂಲವಾಗುತ್ತದೆ, ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಎಚ್ಚರ ವಹಿಸಬೇಕು, ಪರಿಸ್ಥಿತಿ ಹೀಗೆ ಮುಂದುವರೆಯದಲ್ಲಿ ತಾಲೂಕು ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!