ಗ್ರಾಮ ಸ್ವರಾಜ್ಯದ ಕನಸು ನನಸು ಮಾಡಿ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮುಂದಾಗಿ: ಡಾ.ಪರಮೇಶ್ವರ್

25

Get real time updates directly on you device, subscribe now.


ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರ ವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತ ಬಲಗೊಳಿಸಲು ಗ್ರಾಮ ಪಂಚಾಯತಿ ವ್ಯವಸ್ಥೆ ಜಾರಿಗೆ ತರಲಾಗಿದೆ, ಅಧಿಕಾರ ವಿಕೇಂದ್ರೀಕರಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೃಜನೆಯಾದ ಗ್ರಾಮ ಪಂಚಾಯತಿಗಳಿಂದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣುತ್ತಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮಾತನಾಡಿ, ಗ್ರಾಮ ಆಡಳಿತದ ಅಧಿಕಾರ ವಿಕೇಂದ್ರೀಕರಣ ಪ್ರತ್ಯಾ ಯೋಜನೆ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯ ಸರ್ಕಾರ ಅನೇಕ ಯೋಜನೆಗಳ ಮೂಲಕ ಸ್ಥಳೀಯ ಆಡಳಿತ ಬಲಗೊಳಿಸುತ್ತಿದೆ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹೊರತು ಪಡಿಸಿದರೆ ಗ್ರಾಮ ಪಂಚಾಯತಿಗಳಿಗೆ ಮಾತ್ರ ತೆರಿಗೆ ವಿಧಿಸುವ ವಿಶೇಷ ಅಧಿಕಾರವಿದೆ ಎಂದು ತಿಳಿಸಿದರು.
ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಮಾತನಾಡಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರು ಮತ್ತು ಸದಸ್ಯರಿಗೆ ಸರ್ಕಾರಿ ಆದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡುವುದರ ಜೊತೆಗೆ ಅವರೊಂದಿಗೆ ಸಮನ್ವಯ ಸಾಧಿಸಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.

ಶಾಸಕ ಸುರೇಶ್ ಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಉಮಾ ಮಹಾದೇವನ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪಾವಗಡ ಶಾಸಕ ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇನ್ನಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!