ತುಮಕೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲದು ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.
ಶುಕ್ರವಾರ ತುಮಕೂರು ನಗರದ ಬಿಜಿಎಸ್ ಸರ್ಕಲ್ ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಮೈಸೂರಿನ ಮುಡಾದಲ್ಲಿ ನಡೆದಿರುವ ನಿವೇಶನ ಹಗರಣವನ್ನು ಪ್ರತಿಭಟಿಸಲು ಮೈಸೂರಿಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರೂ ಸೇರಿದಂತೆ ಬಿಜೆಪಿಯ ಅನೇಕ ನಾಯಕರನ್ನು ಅರ್ಧ ದಾರಿಯಲ್ಲಿಯೇ ತಡೆದು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ತಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್ ಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚ ರಾಜ್ಯ ಮಾಜಿ ಉಪಾಧ್ಯಕ್ಷ ಶಿವಪ್ರಸಾದ್, ಬಿಜೆಪಿ ನಿಕಟಪೂರ್ವ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಭಾಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಗೌಡ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ವೇದಮೂರ್ತಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಧ್ಯಕ್ಷ ಶಂಕರ್, ಹೇತ್ತೇನಹಳ್ಳಿ ಗಿರಿಶ್, ಮದನ್ ಮತ್ತಿತರರು ಉಪಸ್ಥಿತರಿದ್ದರು.
ಸಿಎಂ ಜಾತಿ ಹೆಸರೇಳಿ ರಕ್ಷಣೆ ಪಡೆಯುವುದು ಹೇಡಿತನ
ಮೂಡ ಹಗರಣ ಖಂಡಿಸಿ ಬಿಜೆಪಿ ಹೋರಾಟ ಬಿಜೆಪಿ ನಾಯಕರ ಬಂಧನ-ಬಿಡುಗಡೆ
Get real time updates directly on you device, subscribe now.
Next Post
Comments are closed.