ತುಮಕೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬರುವ ಆಗಸ್ಟ್ 15ರಂದು ನಾವೆಲ್ಲರೂ ಸಂತಸದಿಂದ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ತಿಳಿಸಿದರು.
ಪೂರ್ವ ತಯಾರಿಗೆ ಸೂಚನೆ
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬ ಆಚರಿಸಲು ಪೂರ್ವ ತಯಾರಿ ನಡೆಸಬೇಕು, ಖಾಸಗಿ ಸೇರಿದಂತೆ ಸರ್ಕಾರಿ ಶಾಲಾ- ಕಾಲೇಜು, ವಸತಿ ನಿಲಯಗಳ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕಲ್ಲದೆ ಸ್ವಚ್ಛತೆ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಜೀವಜಲ ಸಂರಕ್ಷಣೆಯಂತಹ ವಿಷಯಾಧಾರಿತ ಕಾರ್ಯಕ್ರಮ ಆಯೋಜಿಸಬೇಕು, ಉತ್ತಮ ಪ್ರದರ್ಶನ ನೀಡಿದ ಶಾಲಾ ಮಕ್ಕಳಿಗೆ ಬಹುಮಾನ ನೀಡಬೇಕು ಎಂದರಲ್ಲದೆ ಅಗ್ನಿಶಾಮಕ ಇಲಾಖೆಯ ವತಿಯಿಂದ ಅನಿಲ ಸೋರಿಕೆ, ಅಗ್ನಿ ದುರಂತ ಕುರಿತು ಅಣುಕು ಪ್ರದರ್ಶನ ಏರ್ಪಡಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಡಿವೈಎಸ್ ಪಿ ಪರಮೇಶ್, ಡಿಡಿಪಿಐ ಕೆ.ಮಂಜುನಾಥ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಹೇಮಲತ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ ಇತರರು ಇದ್ದರು.
Comments are closed.