ನಗರದಲ್ಲಿ 42 ಕಡೆ ಜ್ವರ ಚಿಕಿತ್ಸಾ ಕೇಂದ್ರ ಓಪನ್

ಮನೆ ಮನೆ ಸರ್ವೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ

46

Get real time updates directly on you device, subscribe now.


ತುಮಕೂರು: ನಗರ ಸೇರಿದಂತೆ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿ.ಪಂ. ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ವತಿಯಿಂದ ನಗರದಲ್ಲಿ 42 ಕಡೆ ಜ್ವರ ಚಿಕಿತ್ಸಾ ಕೇಂದ್ರಗಳನ್ನು ತೆರೆಯುತ್ತಿರುವ ಹಿನ್ನೆಲೆಯಲ್ಲಿ ಮನೆ ಮನೆ ಸರ್ವೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಚಾಲನೆ ನೀಡಿದರು.

ಇಲ್ಲಿನ ಶಾಂತಿನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಈ ಮನೆ ಮನೆ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಕೆಲ ಮನೆಗಳಿಗೆ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜಾ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತೆರಳಿದ ಜಿಲ್ಲಾಧಿಕಾರಿಗಳು, ಮನೆಯಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್, ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಲುಮಠ್, ಡಾ. ನವೀನ್ ಹಾಗೂ ಪಾಲಿಕೆ ಸಿಬ್ಬಂದಿ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!