ತುಮಕೂರು: ಜಿಲ್ಲಾಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು ಸೆಪ್ಟೆಂಬರ್ ಮಾಹೆಯ ಅಂತ್ಯದೊಳಗಾಗಿ ರಾಷ್ಟ್ರೀಯ ಗುಣಮಟ್ಟ ಭರವಸೆ ಪ್ರಮಾಣೀಕರಣ ಹೊಂದಿರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಜಿಲ್ಲಾಸ್ಪತ್ರೆಯು 2000 ರಿಂದ ಈವರೆಗೂ ಎನ್ಕ್ಯುಎಎಸ್ ಪ್ರಮಾಣೀಕರಣ ಹೊಂದಿರುವುದಿಲ್ಲ, ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳು ಎನ್ ಕ್ಯುಎಎಸ್ ಪ್ರಮಾಣೀಕರಣ ಹೊಂದಿರುವುದು ಕಡ್ಡಾಯ, ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಸೊಳ್ಳೆಗಳಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ರೋಗಿಗಳ ಆರೋಗ್ಯ ಹಿತ ದೃಷ್ಟಿಯಿಂದ ಎನ್ ಕ್ಯುಎಎಸ್ ಪ್ರಮಾಣೀಕರಣ ಹೊಂದುವುದು ಅಗತ್ಯವೆಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಪಾಲಿಕೆ ಆರೋಗ್ಯಾಧಿಕಾರಿ ಡಾ.ವೀರೇಶ್ ಕಲ್ಮಠ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್, ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರ್, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಮತ್ತಿತರರು ಇದ್ದರು.
Comments are closed.