ಆಸ್ಪತ್ರೆಗಳಲ್ಲಿ 24 ಗಂಟೆ ವೈದ್ಯರು ಇರಬೇಕು

ವಸತಿ ಶಾಲೆಗಳಿಗೂ ಜಿಲ್ಲಾಧಿಕಾರಿ ಭೇಟಿ- ಪರಿಶೀಲನೆ

33

Get real time updates directly on you device, subscribe now.


ತುಮಕೂರು: ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ಎಲ್ಲಾ ಆಸ್ಪತ್ರೆಗಳಲ್ಲಿ 24*7 ವೈದ್ಯರು ಲಭ್ಯವಿರಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮೂಗನಾಯಕನಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೆಳ್ಳಂಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಆರೋಗ್ಯ ಕೇಂದ್ರದಲ್ಲಿ ಯಾವುದೇ ಡ್ಯೂಟಿ ಡಾಕ್ಟರ್ ಇಲ್ಲದಿರುವುದನ್ನು ಕಂಡು ಗರ್ಭಿಣಿಯರ ಹೆರಿಗೆ, ಮತ್ತಿತರ ತುರ್ತು ಸಂದರ್ಭಗಳಲ್ಲಿ ವೈದ್ಯರ ಉಪಸ್ಥಿತಿ ಅಗತ್ಯವಿರುತ್ತದೆ, ಕರ್ತವ್ಯದಲ್ಲಿರದ ಡ್ಯೂಟಿ ಡಾಕ್ಟರ್ಗೆ ಶೋಕಾಸ್ ನೋಟೀಸ್ ನೀಡಲು ತಹಶೀಲ್ದಾರ್ ಆರತಿ ಅವರಿಗೆ ಸೂಚಿಸಿದರು.

ಆಸ್ಪತ್ರೆ ವಾರ್ಡುಗಳನ್ನು ಪರಿಶೀಲಿಸಿದ ಅವರು ಯಾರೊಬ್ಬರೂ ಒಳ ರೋಗಿಗಳು ಇಲ್ಲದ್ದನ್ನು ಕಂಡು ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇಲ್ಲ, ಇನ್ನು ರೋಗಿಗಳು ಹೇಗೆ ಬರಲು ಸಾಧ್ಯ? ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಹಾಜರಾತಿ ವಹಿ ಪರಿಶೀಲಿಸುತ್ತಾ 34 ಅಧಿಕಾರಿ, ಸಿಬ್ಬಂದಿ ವರ್ಗವಿದ್ದರೂ ವೈದ್ಯರೇ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅವರು ಆರೋಗ್ಯ ಕೇಂದ್ರ, ಆಸ್ಪತ್ರೆಗಳಲ್ಲಿ ಪಾಳಿ ಆಧಾರದ ಮೇಲೆ ದಿನದ 24 ಗಂಟೆಯೂ ವೈದ್ಯರು ಲಭ್ಯವಿರಬೇಕೆಂದು ನಿರ್ದೇಶನ ನೀಡಿದರು.

ಪ್ರಿನ್ಸಿಪಾಲ್ ಸುರೇಶ್ ವಸತಿ ಶಾಲೆಯ ಬಗ್ಗೆ ಮಾಹಿತಿ ನೀಡುತ್ತಾ ಕಳೆದ ವರ್ಷ ಈ ವಸತಿ ಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ತಿಳಿಸಿದರು.
ನಂತರ ಮಂಚಲದೊರೆ ಸರ್ಕಾರಿ ಶಾಲೆ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!