ಸಾಹೇ ವಿವಿ ಸಾಧನೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ

46

Get real time updates directly on you device, subscribe now.


ತುಮಕೂರು: ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣ ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ ಕಾರ್ಯಕ್ರಮದಡಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿ- ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಕೊಡ ಮಾಡುವ ಈ ವರ್ಷದ ಪ್ರೋಸ್ಪೆಕ್ಟ್ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿ ಪಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ, ಅದರಲ್ಲು ಕರ್ನಾಟಕದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಕೂಡ ಒಂದಾಗಿದೆ, ಈ ಸಾಲಿನ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಜನವರಿಯಿಂದ ಜೂನ್ 2024 ಅಭಿವೃದ್ಧಿ ಕಾರ್ಯಕ್ರಮ ದಡಿಯಲ್ಲಿ ಸುಮಾರು 800 ವಿದ್ಯಾರ್ಥಿಗಳು ನೋಂದಾಯಿಸಿ ಆನ್ ಲೈನ್ ಮೂಲಕ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ.

ಸಾಹೇ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿ ಹೆಚ್ಚಿನ ವಿದ್ಯಾರ್ಥಿಗಳು ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ ಯೋಜನೆಯಲ್ಲಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಮದ್ರಾಸ್ ನ ಐಐಟಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾಹೇ ನೋಡಲ್ ಅಧಿಕಾರಿಯದಂತಹ ಪ್ರವೀಣ್ ಕುಮಾರ್.ಸಿ. ಅವರು ಭಾಗವಹಿಸಿ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಪ್ರಶಸ್ತಿ ಸ್ವೀಕರಿಸಿದರು.
ತಾಂತ್ರಿಕ ಮಾಹಿತಿ ಭಂಡಾರವನ್ನು ದೇಶದ ಎಲ್ಲಾ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಆಲೋಚನೆ ಅಭಿವೃದ್ಧಿ ಗುಣಮಟ್ಟದ ವಿಷಯ ಕಲಿಯುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಅದೇ ರೀತಿ ಶ್ರೀಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಹೇ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಈ ಯೋಜನೆಯ ಸದಾವಕಾಶ ಬಳಸಿಕೊಳ್ಳುತ್ತಿದ್ದಾರೆ, ತಾಂತ್ರಿಕ ಮಾಹಿತಿ ಭಂಡಾರವನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಳಸಿಕೊಳ್ಳಲು ವೇದಿಕೆ ಸಿದ್ಧಪಡಿಸಲಾಗಿದೆ.

ಈ ಕಾರ್ಯಕ್ರಮದ ಯೋಜನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಎನ್ಪಿಟಿಇಎಲ್ ಕಾರ್ಯಕ್ರಮದಲ್ಲಿ ನೋಂದಾಯಿಸಲು ಹೆಚ್ಚಿನ ಆಸಕ್ತಿ ತೆಗೆದುಕೊಳ್ಳಲಾಗುವುದು, ಇದರಿಂದ ವಿದ್ಯಾರ್ಥಿಗಳ ತಾಂತ್ರಿಕ ಉನ್ನತಿಗೆ ಹಾಗೂ ಉನ್ನತ ಸಂಸ್ಥೆಗಳಲ್ಲಿನ ನೌಕರಿಗೆ ಸಹಾಯಕವಾಗಲಿದೆ ಎಂದು ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರವಿಪ್ರಕಾಶ ಅಭಿಪ್ರಾಯಪಟ್ಟಿದ್ದಾರೆ.
ಯೋಜನೆಯ ಸಂಯೋಜಕ ಡಾ.ಪ್ರವೀಣ್ ಅವರು ಮದ್ರಾಸ್ ನಲ್ಲಿ ಪಡೆದ ಪ್ರಶಸ್ತಿಯನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ.ಎಂ.ಜೆಡ್.ಕುರಿಯನ್ ಅವರಿಗೆ ಹಸ್ತಾಂತ್ತರಿಸಿದರು.
ಡಾ. ಜಿ.ಪರಮೇಶ್ವರ ಶ್ಲಾಘನೆ

ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗೆ ವೇಗವರ್ಧಕವಾಗಿ ತಾಂತ್ರಿಕ ಶಿಕ್ಷಣದ ಪಾತ್ರವು ಅನಿವಾರ್ಯವಾಗಿದೆ, ಪ್ರಗತಿಯತ್ತ ದಾಪುಗಾಲು ಹಾಕಲು ಶಿಕ್ಷಣದಲ್ಲಿ ಉತ್ಕೃಷ್ಟತೆ ಮತ್ತು ನಾವೀನ್ಯತೆ ಬೆಳೆಸಲು ಶಿಕ್ಷಣ ಸಂಸ್ಥೆಗಳು ಬದ್ಧವಾಗಬೇಕು, ಆ ನಿಟ್ಟಿನಲ್ಲಿ ನಮ್ಮ ವಿಶ್ವವಿದ್ಯಾಲಯವೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎನ್ನುವ ಸಾಹೇ ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅವರು, ಪ್ರಶಸ್ತಿಗೆ ಭಾಜನರಾದವರನ್ನು ಮುಕ್ತ ಕಂಠದಿಂದ ಶ್ಲಾಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!