ಗುಬ್ಬಿ: ಗ್ಯಾರೆಂಟಿ ಯೋಜನೆಗೆ ಎಸ್ ಸಿ ಹಾಗೂ ಎಸ್ ಟಿ ಮೀಸಲಾದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಂಚನೆ ಮಾಡಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿ ಕಾರಿದರು.
ಪಟ್ಟಣದ ತುರುವೇಕೆರೆ ವಿಧಾನಸಭಾ ಕ್ಷೇತ್ರದ ತಾಲೂಕು ಪಂಚಾಯಿತಿ ಅವರ ಕಚೇರಿಯಲ್ಲಿ ಮಾಧ್ಯಮದ ಜೊತೆಯಲ್ಲಿ ಮಾತನಾಡಿ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಇಟ್ಟಿದ್ದ 187 ಕೋಟಿ ಅನುದಾನವನ್ನು ಸಂತೆಯಲ್ಲಿ ಸೊಪ್ಪು ಮಾರಾಟ ಮಾಡಿದ ರೀತಿಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಒಂದು ಕಾಲು ವರ್ಷವಾದರೂ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡದೆ ಆಡಳಿತ ವಿರೋಧಿ ನೀತಿ ಅನುಸರಿಸುತ್ತಿದೆ, ಜನತೆ ಯಾರು ಭಾಗ್ಯಗಳನ್ನು ಕೇಳಿರಲಿಲ್ಲ, ಆ ನೆಪದಲ್ಲಿ ಹಣ ಕೊಳ್ಳೆ ಹೊಡೆದು ಹೊರ ರಾಜ್ಯದ ಚುನಾವಣೆಗೆ ಹಣ ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದೆ ಎಂದರು.
ಮೂಡ ಹಗರಣ ವಿಚಾರವಾಗಿ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರು, ನಾಯಕರು, ಕಾರ್ಯಕರ್ತರು ಮೈಸೂರು ವರೆಗೆ ಆ.03 ರಂದು ಪಾದಯಾತ್ರೆ ಆರಂಭವಾಗಲಿದ್ದು, ಕಾಂಗ್ರೆಸ್ ಸರಕಾರ ಈ ಹಿಂದೆ ಆದ ಹೋರಾಟಕ್ಕೆ ತಡೆಯೋಡಿದ್ದ ರೀತಿಯಲ್ಲಿ ಪಾದಯಾತ್ರೆಯಲ್ಲಿ ತೋರಬಾರದು, ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ತೊಡೆ ತಟ್ಟಿ ಬಳ್ಳಾರಿಗೆ ಪಾದಯಾತ್ರೆ ಹೋದ ಸಂದರ್ಭದಲ್ಲಿ ಯಾವುದೇ ತಡೆಯೊಡಿಲ್ಲ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲಿಕ್ಕೆ ಸ್ವಾತಂತ್ರ್ಯವಿದ್ದು ಇದಕ್ಕೆ ತಡೆಯೊಡ್ಡುವ ಕೆಲಸ ಮಾಡಬಾರದು, ಈಗ ಕಾಂಗ್ರೆಸ್ ನಲ್ಲಿ ಲಾಲ್ ಬಹುದ್ದೂರು ಶಾಸ್ತ್ರಿ ಯಾರು ಇಲ್ಲ, ರೈಲ್ವೆ ಅಪಘಾತವಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು, ಈಗ ಹೈಕಮಾಂಡ್ ನಿಂದ ಲೋ ಕಮಾಂಡ್ ವರೆಗೂ ಮೈಗೆಲ್ಲ ಹಳ್ಳೆಣ್ಣೆ ಹಚ್ಚಿಕೊಂಡು ತಿರುಗಾಡುತ್ತಿದ್ದಾರೆ, ರಾಜೀನಾಮೆ ಕೇಳಿದ ತಕ್ಷಣ ರಾಜೀನಾಮೆ ಕೊಡಿಸುವುದು ಸಾಧ್ಯಾನಾ, ಜನಪ್ರತಿನಿಧಿಯಾಗಿ ಹೋರಾಟ ಮಾಡಲೇ ಬೇಕಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗಾರರಿಗೆ ತಿಳಿಸಿದರು.
ಇನ್ನು ಸಿ.ಎಸ್.ಪುರ ಹೋಬಳಿಯ ಮಾವಿನ ಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರತಿಭಟನೆ ಮಾಡಿರುವ ವಿಷಯದ ಬಗ್ಗೆ ಮಾತನಾಡಿದವರು ವ್ಯವಹಾರಿಕವಾಗಿ ಕಟ್ಟಡ ನಿರ್ಮಾಣ ಮಾಡಿದರೆ ಅದಕ್ಕೆ ಪಂಚಾಯಿತಿಯಿಂದ ಈ ಸ್ವತ್ತು ಖಾತೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ಪರಮೇಶ್ ಕುಮಾರ್, ಚಂಗಾವಿ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
Comments are closed.