ವಾರ್ತಾಧಿಕಾರಿ ಮಮತಾರಿಗೆ ಶ್ರದ್ಧಾಂಜಲಿ ಸಲ್ಲಿಕೆ

30

Get real time updates directly on you device, subscribe now.


ತುಮಕೂರು: ಶುಕ್ರವಾರವಷ್ಟೇ ನಿಧನರಾದ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತಾ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೆದುಳು ರಕ್ತಸ್ರಾವದಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಮತಾ ಅವರು ಶುಕ್ರವಾರ ನಿಧನರಾಗಿದ್ದರು, ಮೃತರ ಗೌರವಾರ್ಥವಾಗಿ ನಗರದ ಪತ್ರಿಕಾಭವನದಲ್ಲಿ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು, ಪತ್ರಕರ್ತರು ಮಮತಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮಮತಾ ಅವರು ಅತ್ಯಂತ ಸ್ನೇಹ ಪೂರ್ವಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಪ್ರತಿಯೊಬ್ಬರೊಂದಿಗೆ ಪ್ರೀತಿಯಿಂದ ಹಾಗೂ ಆತ್ಮೀಯತೆಯರಾಗಿ ವರ್ತಿಸುತ್ತಾ ತಮ್ಮ ಕೆಲಸ ನಿರ್ವಹಿಸುತ್ತಿದ್ದರು, ಅವರು ಇತ್ತೀಚೆಗೆ ತಮ್ಮ ಅನಾರೋಗ್ಯದ ಬಗ್ಗೆ ಪತ್ರಕರ್ತ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು, ಆದರೆ ಇಷ್ಟು ಬೇಗ ಸಾವು ಅವರನ್ನು ಅಪ್ಪಿಕೊಳ್ಳತ್ತದೆ ಎಂಬುದನ್ನು ಊಹಿಸಿರಲಿಲ್ಲ, ಈ ಹಿಂದಿನ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ಅವರೂ ಸಹ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ವಾರ್ತಾ ಇಲಾಖೆಗೆ ಗ್ರಹಣ ಹಿಡಿದಂತಾಗಿದೆ ಎಂದು ನುಡಿದರು.

ಹಿರಿಯ ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ, ವಾರ್ತಾ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತ ಮಾಧ್ಯಮದ ನಡುವಿನ ಸಂಪರ್ಕ ಕೊಂಡಿ, ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ಅತ್ಯಂತ ಹೆಚ್ಚಿನ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಸಿಬ್ಬಂದಿ ಕೊರತೆಯು ಇದಕ್ಕೆ ಕಾರಣ ವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್ ಮಾತನಾಡಿ, ಮಮತಾ ಅವರು ಚುರುಕಿನಿಂದ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಅವರ ಅನಾರೋಗ್ಯ ಅವರನ್ನು ಕರ್ತವ್ಯ ನಿರ್ವಹಿಸಲು ಅನುಮತಿಸುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಕಲಾಶ್ರೀ ಡಾ.ಲಕ್ಷ್ಮಣ್ ದಾಸ್, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಹರೀಶ್ ಆಚಾರ್ಯ, ರಾಷ್ಟ್ರೀಯ ಮಂಡಳಿ ಸದಸ್ಯ ಅನು ಶಾಂತರಾಜು, ನಿರ್ದೇಶಕರಾದ ಜಯಣ್ಣ, ಶಂಕರ್, ಚಿಕ್ಕಣ್ಣ, ರೇಣುಕಾ ಪ್ರಸಾದ್, ಕಾಗ್ಗೆರೆ ಸುರೇಶ್, ಮಾಜಿ ನಿರ್ದೇಶಕ ಕೊಂತಿಹಳ್ಳಿ ರಂಗನಾಥ್ , ನರಸಿಂಹ, ಸುರೇಶ್, ವೀರಪ್ಪ, ರವಿ, ಚಿಕ್ಕ ಬೆಳ್ಳಾವಿ ಶಿವಕುಮಾರ್, ಕನ್ನಡ ಸಂಸ್ಕೃತಿ ಇಲಾಖೆಯ ಸುರೇಶ್ ಸೇರಿದಂತೆ ಹಿರಿಯ, ಯುವ ಪತ್ರಕರ್ತರು ಉಪಸ್ಥಿತರಿದ್ದರು.

ಹಾಲನೂರಿನಲ್ಲಿ ಅಂತ್ಯಕ್ರಿಯೆ
ಅನಾರೋಗ್ಯದಿಂದ ನಿಧನರಾದ ಜಿಲ್ಲಾ ವಾರ್ತಾಧಿಕಾರಿ ಮಮತ ಅವರ ಅಂತ್ಯಕ್ರಿಯೆ ತುಮಕೂರು ಸಮೀಪದ ಹಾಲನೂರಿನಲ್ಲಿ ನೆರವೇರಿತು, ಇದಕ್ಕೂ ಮೊದಲು ಗಣ್ಯರು, ಅಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು, ಪತ್ರಕರ್ತರು ಅಂತ್ಯಕ್ರಿಯಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದರು.

Get real time updates directly on you device, subscribe now.

Comments are closed.

error: Content is protected !!