ತುಮಕೂರು: ಸಂವಿಧಾನ ಹಾಗೂ ಕಾನೂನು ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರತ್ನಿಸಿದ್ದೇವೆ ಹಾಗೂ ಸಾಮಾಜಿಕ ಜಾಲ ತಾಣಗಳ ಕುರಿತೂ ಸಾಕಷ್ಟು ನಿಗಾ ವಹಿಸಲಾಗಿದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ಹೇಳಿದರು.
ನಗರದ ಪ್ರತಿಷ್ಠಿತ ವಿದ್ಯಾನಿಧಿ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು ಕಾಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ಮಾಧ್ಯಮಗಳ ಬಳಕೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಹಿರಿಯ ನಾಗರಿಕ ನ್ಯಾಯಾಧ್ಯಕ್ಷೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಪೋಕ್ಸೋ ಕಾಯ್ದೆಯ ಅನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳ ಮೇಲೆ ಲೈಂಗಿಕ ಚಟುವಟಿಕೆಗಳಿಗೆ ಪ್ರೇರೆಪಿಸಿದರೆ ಅದು ಮಕ್ಕಳ ಮೇಲಿನ ದೌರ್ಜನ್ಯವೆಂದೇ ಪರಿಗಣಿಸಲ್ಪಡುತ್ತದೆ ಹಾಗೂ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದರು.
ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಳ್ಳುವುದು, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುವುದು, ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುವುದು ಎಲ್ಲವೂ ಶಿಕ್ಷಾರ್ಹ ಅಪರಾದಗಳಾಗಿವೆ, ಈ ಕುರಿತು ಎಲ್ಲಾ ಮಕ್ಕಳಿಗೂ ಅರಿವು ಇರಬೇಕು, ತಮ್ಮ ಮೇಲೆ ಯಾವುದೇ ವ್ಯಕ್ತಿಗಳು ಅನುಚಿತವಾಗಿ ವರ್ತಿಸಿದರೆ ಹಾಗೂ ಬ್ಲಾಕ್ ಮೇಲ್ ಮಾಡಿದರೆ ಹಿಂಜರಿಯದೆ ಪೋಷಕರಿಗೆ ತಿಳಿಸಬೇಕು ಎಂದರು.
ಇದೇ ವೇಳೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಈ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ಸಿದ್ದೇಶ್ವರ ಸ್ವಾಮಿ ಹಾಗೂ ಭೋದಕ ಭೋದಕೇತರ ವರ್ಗ ಹಾಜರಿದ್ದರು.
Comments are closed.