ಕೊರಟಗೆರೆ: ಸಜ್ಜನ ರಾಜಕಾರಣಿ, ಸವ್ಯಸಾಚಿ ಹಾಗೂ ರಾಜ್ಯ ಸರ್ಕಾರದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ 73ನೇ ವರ್ಷದ ಹುಟ್ಟುಹಬ್ಬವನ್ನು ಆ.6ರಂದು ಡಾ.ಜಿ.ಪರಮೇಶ್ವರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಸಾಮಾಜಿಕ ಸೇವಾ ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಹಾಗೂ ಪ.ಪಂ ಸದಸ್ಯ ಕೆ.ಆರ್ ಓಬಳರಾಜು ತಿಳಿಸಿದರು.
ಪಟ್ಟಣದ ರಾಜೀವ ಭವನದಲ್ಲಿ ಡಾ.ಜಿ. ಪರಮೇಶ್ವರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೃಹ ಸಚಿವರ ಡಾ.ಜಿ ಪರಮೇಶ್ವರ ಹುಟ್ಟು ಹಬ್ಬದ ಅಂಗವಾಗಿ ತಾಲೂಕಿನ ಸ್ಕೌಟ್ಸ್ ಅಂಡ್ ಗೈಡ್ಸ್ ನ ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ, ಪ.ಪಂಚಾಯಿತಿಯ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣೆ, ಪಟ್ಟಣದ ಹಲವು ಬಡವರಿಗೆ ಬೆಚ್ಚನೆಯ ಹೊದಿಕೆ ವಿತರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ರಮಕ್ಕೆ ವೇದಿಕೆಯ ಸದಸ್ಯರು, ಪ.ಪಂ ಸದಸ್ಯರು, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು, ಅಭಿಮಾನಿಗಳು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ಹೇಳಿದರು.
ಪಪಂ ಸದಸ್ಯ ಎ.ಡಿ ಬಲರಾಮಯ್ಯ ಮಾತನಾಡಿ, ಡಾ.ಜಿ.ಪರಮೇಶ್ವರ ಅವರು ಕೊರಟಗೆರೆಗೆ ಶಾಸಕರಾಗಿ ಬಂದಂತಹ ದಿನಗಳಿಂದಲೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಅವರ ಹುಟ್ಟುಹಬ್ಬವನ್ನು ಪರಮೇಶ್ವರರವರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮತ್ತು ಅಭಿಮಾನಿಗಳು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಣೆ ಮಾಡಿಕೊಂಡು ಬಂದಿದ್ದಾರೆ, ಈ ವರ್ಷ ವಿಶೇಷವಾಗಿ ರಕ್ತದಾನ ಶಿಬಿರ, ಪೌರ ಕಾರ್ಮಿಕರಿಗೆ ಗೌರವ ಸಲ್ಲಿಕೆ, ಕಡು ಬಡವರಿಗೆ ಬೆಚ್ಚನೆಯ ಹೊದಿಕೆ ಈಗೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಗೃಹ ಸಚಿವರಾದ ಡಾ.ಜಿ ಪರಮೇಶ್ವರರವರು ಸಂತೋಷವನ್ನು ಸಹ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಪ.ಪಂ ಸದಸ್ಯರಾದ ನಾಗರಾಜು, ನಂದೀಶ್, ಮಾಜಿ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ತುಮುಲ್ ಮಾಜಿ ನಿರ್ದೇಶಕ ಈಶ್ವರಯ್ಯ, ಮುಖಂಡರಾದ ಎಲ್.ರಾಜಣ್ಣ, ಗಟ್ಲಹಳ್ಳಿ ಕುಮಾರ್, ತುಂಗಾ ಮಂಜುನಾಥ್, ಮಹೇಶ್, ಅರವಿಂದ್, ಮಹಮ್ಮದ್ ಇಸ್ಮಾಯಿಲ್, ರವಿಕುಮಾರ್, ಹನುಮಂತು, ಲಕ್ಷ್ಮೀಪತಿ, ಗಿರೀಶ್, ಏರ್ ಟೆಲ್ ಗೋಪಿ, ಯುವ ಕಾಂಗ್ರೆಸ್ ದೀಪಕ್, ರಘುವೀರ್ ಇತರರು ಇದ್ದರು.
Comments are closed.